Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೆ ಸನ್ಯಾಸದತ್ತ ಅಪರ ಜಿಲ್ಲಾಧಿಕಾರಿ !

ಮಂಡ್ಯ: ಹದಿಮೂರು ವರ್ಷಗಳ ಬಳಿಕ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್. ನಾಗರಾಜು ಅವರು ಮತ್ತೆ ಸನ್ಯಾಸ ದೀಕ್ಷೆ ಪಡೆಯುವತ್ತ ಮನಸ್ಸು ಮಾಡಿದ್ದಾರೆ ಎಂಬ ವದಂತಿಗಳು ಎಲ್ಲೆಡೆ ಹರಡಿವೆ.

2011ರಲ್ಲಿ ಉಪವಿಭಾಗಾಧಿಕಾರಿಯಾಗಿದ್ದ ಸಮಯದಲ್ಲೇ ಡಾ.ಎಚ್.ಎಲ್ .ನಾಗರಾಜು ಅವರು ಆದಿ ಚುಂಚನಗಿರಿ ಮಠದಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದರು. ನಿಶ್ಚಲಾನಂದನಾಥ ಎಂದು ಹೆಸರನ್ನೂ ಬದಲಾಯಿಸಿಕೊಂಡಿದ್ದರು. ಆ ವೇಳೆ ಕುಟುಂಬದವರು, ಸಾರ್ವಜನಿಕರ ಒತ್ತಡಕ್ಕೆ ಮಣಿದು ಸನ್ಯಾಸ ದೀಕ್ಷೆ ತ್ಯಜಿಸಿ ಮತ್ತೆ ಸರ್ಕಾರಿ ಅಧಿಕಾರಿಯಾಗಿ ಮುಂದುವರೆದಿದ್ದರು.

ಅವಿವಾಹಿತರಾಗಿಯೇ ಉಳಿದುಕೊಂಡಿರುವ ಡಾ.ಎಚ್.ಎಲ್.ನಾಗರಾಜು ಮತ್ತೆ ಸನ್ಯಾಸತ್ವ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಕೆಂಗೇರಿ ಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಶ್ರೀಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ಅನಾರೋಗ್ಯ ಕಾರಣದಿಂದ ಪೀಠವನ್ನು ತ್ಯಜಿಸುತ್ತಿದ್ದು, ಆ ಸ್ಥಾನಕ್ಕೆ ಡಾ.ಎಚ್. ಎಲ್.ನಾಗರಾಜು ಪೀಠಾಧಿಪತಿಗಳಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದೇ ಕಾರಣಕ್ಕೆ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರೊಂದಿಗೆ ನಾಗರಾಜು ಅವರು ನಿರಂತರ ಸಂಪರ್ಕ ದಲ್ಲಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಈಗಾಗಲೇ ಎಡಿಸಿ ನಾಗರಾಜು ಅವರು ಇನ್ನೂ ಎರಡು ಮೂರು ದಿನಗಳಲ್ಲಿ ರಜೆಯ ಮೇಲೆ ತೆರಳುತ್ತಿದ್ದಾರೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡದೆ ಸ್ವಯಂ ನಿವೃತ್ತಿ ಪಡೆಯಬಹುದು ಎಂದು ಹೇಳಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ಪಡೆಯಲು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಅವರು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು.

ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಕೆ ಸಾಧ್ಯತೆ: ಚಲುವರಾಯಸ್ವಾಮಿ

ಅಪರ ಜಿಲ್ಲಾಧಿಕಾರಿ ನಾಗರಾಜು ಸನ್ಯಾಸ ದೀಕ್ಷೆ ಪಡೆಯುವ ವಿಚಾ ರ ನನ್ನ ಗಮನಕ್ಕೂ ಬಂದಿದೆ. ಅದು ಅವರ ವೈಯಕ್ತಿಕ ವಿಚಾರ. ಈಗಾಗಲೇ ಹಿಂದೆಯೂ ಅವರು ದೀಕ್ಷೆ ತೆಗೆದುಕೊಂಡಿದ್ದರು. ಹಿತೈಷಿಗಳ ಒತ್ತಾಯದಿಂದ ವಾಪಸ್ ಬಂದಿದ್ದರು. ಈಗ ಮತ್ತೆ ಅದೇ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಇನ್ನೆರಡು ಮೂರು ದಿನಗಳಲ್ಲಿ ರಜೆ ಕೇಳಿದ್ದಾರೆ. ಬಳಿಕ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಬಹುದು.

ಜನಸ್ನೇಹಿ ಅಧಿಕಾರಿ ಎಂಬ ಹೆಗ್ಗಳಿಕೆ

ತಹಸೀಲ್ದಾ‌ರ್, ಉಪ ವಿಭಾಗಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಸೇರಿ ದಂತೆ ವಿವಿಧ ಉನ್ನತ ಹುದ್ದೆಗಳನ್ನು ವಹಿಸಿಕೊಂಡು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದ ಡಾ.ನಾಗರಾಜು ಅವರು ಜನಸ್ನೇಹಿ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಪರ ಜಿಲ್ಲಾಧಿಕಾರಿ ಹುದ್ದೆಯ ಜೊತೆಗೆ ಮೈಷುಗರ್ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕರ್ತವ್ಯ ನಿರ್ವಹಿಸುತ್ತಿರುವ ನಾಗರಾಜು ಅವರು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷರು ಹಾಗೂ ಹಣಕಾಸು ಸಮಿತಿಯಲ್ಲೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅತ್ಯುತ್ತಮ ಭಾಷಣಕಾರರಾಗಿಯೂ ಗಮನ ಸೆಳೆದಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವಂತಹ ಮಾತುಗಳನ್ನಾಗಿ ಅವರ ಆಕರ್ಷಣೆಗೂ ಒಳಗಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ