Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶರಣ ಸಂಸ್ಕೃತಿ ಉತ್ಸವ : ಕಾಯಕಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

 

ಗೋಕಾಕ: ನಗರದ ಶ್ರೀ ಶೂನ್ಯ ಸಂಪಾದನ ಮಠದ ಆಶ್ರಯದಲ್ಲಿ ಕಾಯಕಯೋಗಿ ಶ್ರೀ ವiನಿಪ್ರ ಲಿಂಗೈಕ್ಯ ಬಸವ ಮಹಾಸ್ವಾಮಿಗಳವರ ಇಪ್ಪತ್ತನೆಯ ಪುಣ್ಯ ಸ್ಮರಣೋತ್ಸವ ಅಂಗವಾಗಿ ಶರಣ ಸಂಸ್ಕೃತಿ ಉತ್ಸವ ಹಾಗೂ ಕಾಯಕಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭವು ಫೆಬ್ರವರಿ ೧ ರಿಂದ ೪ ರವರೆಗೆ ವೈಭವದಿಂದ ಜರುಗಲಿದೆ ಎಂದು ಕಾರ್ಯಕ್ರಮದ ರೂವಾರಿ ಪೂಜ್ಯಶ್ರೀ ವiನಿಪ್ರ ಮುರುಘರಾಜೇಂದ್ರ ಮಹಾಸ್ವಾಮಿಗಳು ತಿಳಿಸಿದ್ದಾರೆ.
ನಾಲ್ಕು ದಿನಗಳವರೆಗೆ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ವಿವರ ನೀಡಿರುವ ಅವರು, ದಿನಾಂಕ ೧ ರಂದು ಶಾಲಾ ವಿದ್ಯಾರ್ಥಿಗಳಿಂದ ಅರಿವು ಅಕ್ಷರ ಆರೋಗ್ಯ ಕುರಿತು ಜಾಗೃತಿಗಾಗಿ ಕಾಲ್ನಡಿಗೆ ಜಾಥಾ. ಅಂದು ಸಂಜೆ ಹಾಸ್ಯ ಮತ್ತು ಸಂಗೀತ ಸಮಾವೇಶ ಕಲಾವಿದರಾದ ಮಹಾನ್ಯ ಪಾಟೀಲ್, ಮಿಮಿಕ್ರಿ ಗೋಪಿ, ಗಿಲ್ಲಿ ನಟ ಭಾಗವಹಿಸಲಿದ್ದು ಶಾಸಕ ರಮೇಶ ಜಾರಕಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ದಿನಾಂಕ ೨ ರಂದು ಸಂಜೆ ೬ ಗಂಟೆಗೆ ಆರಕ್ಷಕರ ಸಮಾವೇಶ. ಬೈಲೂರಿನ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ಮುಂಡರಗಿ, ನಿವೃತ್ತ ಪೊಲೀಸ ಅಧಿಕಾರಿ ಡಾ: ಶಂಕರ್ ಬಿದರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ: ಅಲೋಕ್ ಕುಮಾರ ಸೇರಿದಂತೆ ಅನೇಕ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ದಿನಾಂಕ ೩ ರಂದು ಸಂಜೆ ೬ ಗಂಟೆಗೆ ಕಾಯಕಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಮಹಿಳಾ ಸಮಾವೇಶ ಸಮಾರಂಭವು ಜರುಗಲಿದ್ದು, ಓಲಂಪಿಕ್ ಕ್ರೀಡೆಯಲ್ಲಿ ಭಾರತ ದೇಶದ ಜಮ್ನಾಸ್ಟಿಕ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಹೆಮ್ಮೆಯ ಕ್ರೀಡಾಪಟು ಪದ್ಮಶ್ರೀ ದೀಪಾ ಕರ್ಮಾಕರ್ ಅವರಿಗೆ ಕಾಯಕಶ್ರೀ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು.
ದಿನಾಂಕ ೪ ರಂದು ಸಂಜೆ ಯುವ ಸಮಾವೇಶ ನಡೆಯಲಿದ್ದು. ಅಂದು ಮುಂಜಾನೆ. ಶ್ರೀಮಠದ ಗದ್ದುಗೆಗೆ ಅಭಿಷೇಕ ಹಾಗೂ ಬಿಲ್ವಾರ್ಚನೆ, ಸಹಸ್ರ ಸಹಸ್ರ ಮುತ್ತೆöÊದೆಯರಿಗೆ ಉಡಿ ತುಂಬವ ಕಾರ್ಯಕ್ರಮ, ಪಲ್ಲಕ್ಕಿ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ.

ಪ್ರತಿ ದಿವಸದ ಸಮಾರಂಭದಲ್ಲಿ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿದ ಮಹನೀಯರಿಗೆ ಹಾಗೂ ಶರಣ ಸಂಸ್ಕತಿ ಉತ್ಸವ ಕಾರ್ಯಕ್ರಮದ ದಾಸೋಹಿಗಳಿಗೆ ಗೌರವದ ಸನ್ಮಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗಳು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ