Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೇ 2ರಿಂದ ಬೆಳಗಾವಿಯಲ್ಲಿ ಸತೀಶ ಜಾರಕಿಹೊಳಿ ಕ್ರಿಕೆಟ್ ಪಂದ್ಯಾವಳಿ

 

ಬೆಳಗಾವಿ : ಭಾತಕಾಂಡೆ ಸ್ಪೋರ್ಟ್ ಆಕ್ಯಾಡೆಮಿ ಹಾಗೂ ಬೆಳಗಾವಿ ‌ಜಿಲ್ಲೆ ವಾಲ್ಮೀಕಿ ಸಮಾಜದ ಸಹಯೋಗದಲ್ಲಿ ಡಾ. ಸತೀಶ್ ಜಾರಕಿಹೊಳಿ ಆಲ್ ಕರ್ನಾಟಕ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಹೇಳಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೇ.2 ರಂದು ಸರದಾರ್ಸ್ ಮೈದಾನದ ಆವರಣದಲ್ಲಿ ಡಾ. ಸತೀಶ್ ಜಾರಕಿಹೊಳಿ ಆಲ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಆಯೋಜಿಸಲಾಗಿದೆ. ಪೈನಲ್ ವಿಜೇತರಿಗೆ 3 ಲಕ್ಷ 50 ಸಾವಿರ ನಗದು ಹಾಗೂ ಟ್ರೋಫಿ, ರನರ್ ಅಪ್ ಗೆ 2 ಲಕ್ಷ ರೂ. ನಗದು ಹಾಗೂ ಟ್ರೋಫಿ, ಸರಣಿ ಶ್ರೇಷ್ಠ, ಅತ್ಯುತ್ತಮ ಬ್ಯಾಟ್ಸಮನ್, ಅತ್ಯುತ್ತಮ ಬಾಲರ್ ಪ್ರಶಸ್ತಿಯೂ ಇರುತ್ತದೆ ಎಂದರು.

ಕರ್ನಾಟಕದಿಂದ ಒಟ್ಟು 40 ಕ್ರಿಕೆಟ್ ತಂಡಗಳು ಭಾಗವಹಿಸಲಿವೆ. ಇದು 10 ದಿನಗಳ ಕಾಲ ನಾಕೌಟ್ ಪಂದ್ಯಾವಳಿ ನಡೆಯಲಿವೆ ಎಂದರು. ಕ್ರೀಡೆಗೆ ಉತ್ತೇಜನ ನೀಡುವ ಮೂಲಕ ಸಚಿವ ಸತೀಶ ಜಾರಕಿಹೊಳಿ ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಕರ್ನಾಟಕದ ಉದಯೋನ್ಮುಖ ಕ್ರಿಕೆಟಿಗರಿಗೆ ವೇದಿಕೆಯನ್ನು ಒದಗಿಸುತ್ತಿದ್ದಾರೆ. ಗ್ರಾಮೀಣ ಕ್ರೀಡಾಪಟುಗಳು ಸಹ ರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು. ಅವರ ಸಹ ಅಂತರಾಷ್ಟ್ರೀಯ ‌ಮಟ್ಟದಲ್ಲಿ ಬೆಳಬೇಕು ಎಂದು ವಿವಿಧ ಕ್ರೀಡೆಗಳನ್ನು ಆಯೋಜಿಸಿ ಅವಕಾಶ ಕಲ್ಪಿಸುತ್ತಿದ್ದಾರೆ. ಇಂತಹ ಕ್ರೀಡೆಗಳನ್ನು ಸದ್ಬಳಿಕೆ ಮಾಡಿಕೊಂಡು ಯುವಕರು ಜೀವನ ಗುರಿ ಮುಟ್ಟಬೇಕು ಎಂದು ತಿಳಿಸಿದರು.

ಪಾಂಡುರಂಗ ನಾಯಿಕ, ಮಿಲಿಂದ ಭಾತಕಾಂಡೆ, ಸಂಜು ನಾಯಿಕ, ರೂಪೇಶ ಪಾವಲೆ , ಪ್ರಸಾದ ಶಿರ್ವಾಲ್ಕರ್ , ನಾಸೀರ್ ಪಠಾಣ, ಹಾಗೂ ಇತರರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ