Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ !

 

ಬೆಳಗಾವಿ:
ಮಾಸ್ಟರ್ ಮೈಂಡ್ ಖ್ಯಾತಿಯ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅವರು ಮುಂದಿನ ಮುಖ್ಯಮಂತ್ರಿಯಾಗುವ ಅಭಿಲಾಷೆಯನ್ನು ಆಗಾಗ ವ್ಯಕ್ತಪಡಿಸುತ್ತಲೇ ಇರುತ್ತಾರೆ. 2028 ರಲ್ಲಿ ಅವರು ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಈಗ ಅವರ ಕಟ್ಟಾ ಶಿಷ್ಯರಲ್ಲಿ ಒಬ್ಬರಾದ ಸವದತ್ತಿ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ತಮ್ಮ ಗುರು ಮುಖ್ಯಮಂತ್ರಿ ಅಗಲಿದ್ದಾರೆ ಎಂದು ಹೇಳಿ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಮತ್ತೆ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಶುರುವಾಗಿರುವಾಗಲೇ ವಿಶ್ವಾಸ ವೈದ್ಯ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ ತೆರೆದ ವೇದಿಕೆಯ ಮೇಲೆಯೇ ಸತೀಶ ಜಾರಕಿಹೊಳಿ ಮುಂದಿನ ಸಿಎಂ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಹೇಳಿದ್ದಾರೆ.

ಯರಗಟ್ಟಿ ಪಟ್ಟಣದಲ್ಲಿ ಮಾತನಾಡಿರುವ ವಿಶ್ವಾಸ ವೈದ್ಯ, ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಾತೀತವಾಗಿ ಪ್ರಭಾವ ಬೆಳೆಸಿಕೊಂಡಿರುವ ಸತೀಶ ಅವರು ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ ಎಂದು ಹೇಳಿದ್ದಾರೆ.

 

ದೀಪಾವಳಿ ಹಾಗೂ ರಾಜ್ಯೋತ್ಸವ ನಿಮಿತ್ತ ರಸಮಂಜರಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮ ಉದ್ಘಾಟಕರಾಗಿ ಭಾಗಿಯಾಗಿದ್ದ ಸವದತ್ತಿ ಶಾಸಕ ಸಿಎಂ ವಿಚಾರದ ಬಗ್ಗೆ ಯಾರು ಕೂಡಾ ಮಾತನಾಡಬಾರದು ಎಂದು ಆದೇಶಿಸಿದ್ದರೂ ಮುಂದಿನ ಸಿಎಂ ಸತೀಶ ಜಾರಕಿಹೊಳಿ ಎಂದಿದ್ದಾರೆ.

ಸತೀಶ ಜಾರಕಿಹೊಳಿ ಸಿಎಂ ಆಗಬೇಕು ಎಂಬ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯವೂ ಸಾಕಷ್ಟು ಚರ್ಚೆಗಳು ಆಗ್ತಿವೆ. ಸತೀಶ ಜಾರಕಿಹೊಳಿ ನೇರವಾಗಿಯೇ ಹಲವು ಬಾರಿ ನಾನು 2028 ರಲ್ಲಿ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಈ ನಡುವೆ ಸತೀಶ್ ಜಾರಕಿಹೊಳಿಯವರ ಮೈಸೂರು ಪ್ರವಾಸ, ದುಬೈ ಪ್ರವಾಸಗಳ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿದ್ದು ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿ ಸಿಎಂ ಸ್ಥಾನದ ಕುರಿತು ಚರ್ಚೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.

 

ಇದೀಗ ಸವದತ್ತಿ ಶಾಸಕ ವಿಶ್ವಾಸ ವೈದ್ಯ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅಧಿಕಾರ ಹಂಚಿಕೆಯಾದರೆ ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ರೇಸ್‌ನಲ್ಲಿ ಇರುತ್ತೇನೆ ಎಂಬ ಸಂದೇಶವನ್ನು ತಮ್ಮ ಆಪ್ತ ಶಾಸಕರ ಮೂಲಕ ಸತೀಶ್ ಜಾರಕಿಹೊಳಿ ರವಾನೆ ಮಾಡಿದ್ದಾರೆ ಎನ್ನುವ ಗುಸುಗುಸು ಚರ್ಚೆಗಳು ನಡೆದಿವೆ. ಒಟ್ಟಾರೆ ಸಿಎಂ ಚರ್ಚೆ ರಾಜ್ಯದ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ