Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸತೀಶ ಜಾರಕಿಹೊಳಿ ನೇರ ನುಡಿ

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಮುಖ್ಯಮಂತ್ರಿ ಆಗಬೇಕು ಎಂದು ಸತೀಶ್ ಜಾರಕಿಹೊಳಿ ಆಗಾಗ ಮನದ ಆಸೆ ವ್ಯಕ್ತಪಡಿಸುತ್ತಲೇ ಇದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ನಾನು ಕೇಳಿಯೂ ಇಲ್ಲ, ಅಧ್ಯಕ್ಷ ಸ್ಥಾನದ ಬಗ್ಗೆ ನನಗೆ ಏನೂ ಹೇಳಿಲ್ಲ. ಈ ವಿಚಾರದಲ್ಲಿ ಯಾವ ಒತ್ತಡವೂ ನನಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವ ಸತೀಶ ಜಾರಕಿಹೊಳಿ, 2028ಕ್ಕೆ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದಷ್ಟೇ ಹೇಳಿದ್ದೇನೆ, ನಾನೇ ಮುಖ್ಯಮಂತ್ರಿಯಾಗುವುದಾಗಿ ಹೇಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿ, ಮುಖ್ಯಮಂತ್ರಿ ಸ್ಥಾನ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ಹೈಕಮಾಂಡ್ ಜೊತೆಗಿನ ಒಪ್ಪಂದದ ಬಗ್ಗೆ ಆರು ತಿಂಗಳ ಮೊದಲೇ ಹೇಳಿದ್ದೆ. ಒಪ್ಪಂದ ದೆಹಲಿಯಲ್ಲೇ ಆಗಿರಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದು ಹೈಕಮಾಂಡ್ ಮಟ್ಟದಲ್ಲಿ ನಡೆದಿರಬಹುದು. ಅವರಿಗಷ್ಟೇ ಗೊತ್ತು, ನಮಗೆ ಗೊತ್ತಿಲ್ಲ ಎಂದರು.

ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿ ಎಂದು ಪಕ್ಷದ ಅಧ್ಯಕ್ಷರ ಬಾಯಲ್ಲಿ ಬಾರದ ಬಗ್ಗೆ ನೀವು ಅವರನ್ನೇ (ಡಿ. ಕೆ.ಶಿವಕುಮಾರ್) ಕೇಳಿ ಎಂದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನನಗೂ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷನಾಗುವ ಆಸೆ ಇದೆ: ನನಗೂ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇದೆ. ಎಲ್ಲರಿಗೂ ಆಸೆ ಸಹಜ, ರಾಜ್ಯಾಧ್ಯಕ್ಷರ ಬದಲಾವಣೆ, ಮುಖ್ಯಮಂತ್ರಿಗಳ ಬದಲಾವಣೆ ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದರು.

ನ. 29 ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತ ನಡೆಸುತ್ತಿದೆ. ಸರಕಾರದ ಪೂರ್ಣಾವಧಿವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅವರ ಮಂತ್ರಿ ಮಂಡಲದಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಹಿಂದೆ ಸತೀಶ್ ಜಾರಕಿಹೊಳಿ ಸಿಎಂ ಆಗ್ತಾರೆ ಅಂತ ಸುದ್ದಿ ಹರಿದಾಡಿತ್ತು. ಈಗ ಕೆಪಿಸಿಸಿ ಅಧ್ಯಕ್ಷ ಆಗ್ತಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ವಿಚಾರವಾಗಿ ನಾನು ಯಾವುದೇ ಲಾಬಿನೂ ಮಾಡಿಲ್ಲ. ಒತ್ತಡವನ್ನೂ ಹಾಕಿಲ್ಲ. ಉಪಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿದ್ದೇವೆ. ಖುಷಿಯಿದೆ. ಮಂತ್ರಿಯಾಗಿದ್ದೇನೆ ತೃಪ್ತಿಯಿದೆ ಎಂದು ಹೇಳಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಂಬಂಧ ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡಬೇಕು. ಯಾರಿಗೆ ಕೊಡಬೇಕು? ಯಾಕೆ ಕೊಡಬೇಕು? ಅದರಿಂದ ಆಗುವ ಲಾಭ ಏನು ಎಂಬ ಬಗ್ಗೆ ಅವರು ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದಿದ್ದರು.

ಅಧಿಕಾರ ಹಂಚಿಕೆ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಮಾತು ಕೇಳಿ ಬರುತ್ತಿರುವುದರ ಬಗ್ಗೆ ಮಾತನಾಡಿ, ಈ ಬಾರಿ ಆ ರೀತಿ ಆಗಿಲ್ಲ. ಈ ಬಾರಿ ಪೋರ್ಟ್‌ಪೋಲಿಯೋದಲ್ಲಿ ನಾವೇ ಇದ್ದೇವೆ. ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕಕ್ಕೆ ಒಳ್ಳೆಯ ಖಾತೆಗಳನ್ನೇ ಕೊಟ್ಟಿದಾರೆ ಎಂದು ತಿಳಿಸಿದ್ದರು.

ಕಾಂಗ್ರೆಸ್‌ನಲ್ಲಿ ಬಣ ರಾಜಕೀಯದ ಬಗ್ಗೆ ಮಾತನಾಡಿ, ಬಣ ಬಡಿದಾಟ ಇದೆ ಎಂದು ನಾನು ಹೇಳುತ್ತಿದ್ದೇನೆ. ನಮ್ಮ ಪಕ್ಷದಲ್ಲೂ ಇದೆ. ಬೇರೆ ಪಕ್ಷದಲ್ಲೂ ಬಣ ಬಡಿದಾಟ ಇದೆ. ಬಣಗಳು ಇರುತ್ತವೆ, ಆದರೆ ಎಂದು ಹೇಳಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ