Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಿತ್ರ ಸಂತೆಯಿಂದ ಬೆಳಗಾವಿಯ ಸತ್ಯನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ

ಬೆಳಗಾವಿ : ಬೆಂಗಳೂರಿನ ಚಿತ್ರಸಂತೆಯಿಂದ ಸಂಗೀತ ಕ್ಷೇತ್ರದಲ್ಲಿ 17 ವರ್ಷಗಳಿಂದ ಮಕ್ಕಳಿಗೆ ನಾದಸುಧಾ ಸುಗಮ ಸಂಗೀತಾ ಶಾಲೆಯ ಮೂಲಕ ಸಂಗೀತವನ್ನು ಧಾರೆಯುತ್ತಿರುವ ಬೆಳಗಾವಿಯ ಡಾ| ಎಂ ಎನ್ ಸತ್ಯನಾರಾಯಣ ಅವರಿಗೆ ಬೆಂಗಳೂರಿನ ಹೈಡ್ ಪಾರ್ಕ್ ನಲ್ಲಿ ಆಯೋಜಿಸಿದ್ದ ಹೆಮ್ಮೆಯ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ""ಬೆಸ್ಟ್-ಮ್ಯುಸಿಷಿಯನ್"" ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿರುವ ಸಂಯುಕ್ತ ಹೊರನಾಡು ಅವರು ಮಾತನಾಡುತ್ತಾ ಕರ್ನಾಟಕದಾದ್ಯoತ, ಬೇರೆ ಬೇರೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಮಾಡಿರುವ ಸಾಧಕರನ್ನು ಗುರುತಿಸಿ ಇಂಥ ದೊಡ್ಡ ವೇದಿಕೆಯಲ್ಲಿ ಒಂದು ಗೂಡಿಸಿ ಸನ್ಮಾನಿಸಿ ಗೌರವಿಸುತ್ತಿರುವುದು ಚಿತ್ರಸಂತೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಹಾಡಿ ಹೊಗಳಿದರು.

ಈ ಕೆಲಸ ನನಗೆ ಒದಗಿರುವುದು ನನ್ನ ಜೀವಮಾನದಲ್ಲೇ ಮೊದಲ ಬಾರಿ ಎಂದು ಹೆಮ್ಮೆಯಿಂದ ಅಭಿಪ್ರಾಯ ಪಟ್ಟರು.
ಬೇರೆ ಬೇರೆ ಕ್ಷೇತ್ರಗಳಲ್ಲಿ 25 ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ಪ್ರಸಿದ್ಧ ನಟಿ ಸುಧಾ ಬೆಳವಾಡಿ ಅವರು ಸೇರಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಗಿರಿ ಗೌಡರ್ ಅವರ ಚಿತ್ರಸಂತೆ ಯ 157 ನೇ ಸಂಚಿಕೆ ಬಿಡುವ ಬಿಡುಗಡೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಸುಮಾರು 150 ಕ್ಕೂ ಹೆಚ್ಚು ಜನ ಸೇರಿದ್ದ ಈ ಸಮಾರಂಭ ಚಿಕ್ಕದಾಗಿ ಚೊಕ್ಕದಾಗಿ ವಿಜೃಂಭಣೆಯಿಂದ ಜರುಗಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ