Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜು.18 ರ ಗುರುವಾರ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಅದರಂತೆಯೇ ಉತ್ತರ ಕನ್ನಡದ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ, ಯಲ್ಲಾಪುರ, ಚಿಕ್ಕಮಗಳೂರಿನ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಸೇರಿ ಒಟ್ಟು 5 ತಾಲೂಕು, ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ತಾಲೂಕಿನಲ್ಲಿ ನಾಳೆ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆ :
ಕೆಲ ದಿನಗಳಿಂದ ಹೊಸನಗರ, ಸಾಗರ, ಸೊರಬ ಹಾಗೂ ತೀರ್ಥಹಳ್ಳಿ ತಾಲೂಕುಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 18ರಂದು (ಗುರುವಾರ) ಅಂಗನವಾಡಿಯಿಂದ ಪಿಯುಸಿ ವರೆಗೆ ಈ ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಿ ತಹಸೀಲ್ದಾರರು ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿಯಿಂದ ಪಿಯುಸಿ ಕಾಲೇಜುಗಳವರೆಗೆ ಗುರುವಾರ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಅನುದಾನಿತ ಹಾಗೂ ಪಿಯುಸಿವರೆಗೆ ಗುರುವಾರ (ಜುಲೈ 18 ರಂದು) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ರಜೆ ಘೋಷಣೆ : ವಿಪರೀತ ಮಳೆ ಹಿನ್ನೆಲೆಯಲ್ಲಿ ಪುತ್ತೂರು,
ಬಂಟ್ವಾಳ,ಬೆಳ್ತಂಗಡಿ,ಸುಳ್ಯ,
ಕಡಬ ತಾಲೂಕುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ರಜೆ ಇಲ್ಲ : ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕು ಶಾಲಾ ಕಾಲೇಜುಗಳಿಗೆ ರಜೆ ಇಲ್ಲ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ