Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಾಲಾ ಶಿಕ್ಷಣ ಇಲಾಖೆ : ಮಹತ್ವದ ಸೂಚನೆ

 

ಬೆಳಗಾವಿ :
ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಘನ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ದಿ.6-10-2023 ಮತ್ತು 9-10-2023ರ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು(Quash) ಮಾಡಲಾಗಿರುತ್ತದೆ.

ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 7-3-2024 ರಂದು ಘನ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಘನ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಪ್ರಕರಣವನ್ನು ಆಲಿಸಿ ಸದರಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಮುಂದುವರೆಸಲು ಮಧ್ಯಂತರ ತೀರ್ಪು ನೀಡಲಾಗಿರುತ್ತದೆ. ಅದರಂತೆ ದಿನಾಂಕ: 11-03-2024ರಿಂದ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಪ್ರಾರಂಭಿಸಲಾಗಿರುತ್ತದೆ.

ತದನಂತರ ರಾಜ್ಯ ಘನ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ. ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024. ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವೆಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿದ್ದು, ಈ ದಿನದ ಆದೇಶದಲ್ಲಿ ಸದರಿ ಮಧ್ಯಂತರ ತೀರ್ಪನ್ನು ರದ್ದುಪಡಿಸಿರುತ್ತದೆ ಮತ್ತು ಪ್ರಕರಣವನ್ನು ವಿಭಾಗೀಯ ಪೀಠಕ್ಕೆ ರವಾನಿಸಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ: 13-3-2024ರಿಂದ ನಡೆಯಬೇಕಾಗಿದ್ದ 5. 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿದೆ ಎಂದು
ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ