Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಸ್‌ಸಿಪಿ, ಟಿಎಸ್‌ಪಿ ಅನುದಾನ ಶೇ.100 ಸದ್ಬಳಕೆಯಾಗಬೇಕು: ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ

 

ಬೆಳಗಾವಿ :
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಪ್ರತಿ ಇಲಾಖಾವಾರು ವಿವಿಧ ಯೋಜನೆಗಳಡಿ ಬಿಡುಗಡೆಯಾಗುವ ಅನುದಾನವನ್ನು ಶೇ.100 ರಷ್ಟು ಸಮಪರ್ಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಯೋಜನೆಗಳ ಸೂಕ್ತ ಮಾಹಿತಿ, ಸದ್ಬಳಕೆ ಸಂಬಂಧವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕಾ ಮಟ್ಟದ ಅಧಿಕಾರಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಪ್ರಸಕ್ತ ವರ್ಷದ ಆಗಸ್ಟ್ ಅಂತ್ಯದವರೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಗಳ ಅಡಿಯಲ್ಲಿ ಇಲಾಖಾವಾರು ಲಭ್ಯವಿರುವ ಅನುದಾನದಲ್ಲಿ ಕೈಗೊಂಡ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನುದಾನ ಸದ್ಬಳಕೆಗೆ ಸೂಚನೆ:

ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಚರ್ಚಿಸಿ ಮಾಹಿತಿ ಕಲೆ ಹಾಕಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಲ್ಯಾಣಕ್ಕಾಗಿ ಇಲಾಖಾವಾರು ಬಿಡುಗಡೆಯಾಗಿರುವ ಅನುದಾನ ಶೇ.100 ರಷ್ಟು ಸದ್ಬಳಕೆಯಾಗಬೇಕು. ಯಾವ ಯಾವ ಇಲಾಖೆಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮಗಳಡಿಯಲ್ಲಿ ಅನುದಾನ ಬಿಡುಗಡೆಯಾಗಿಲ್ಲ ಅನ್ನುವ ಕುರಿತಾಗಿ ವರದಿ ನೀಡಿದರೆ ಅನುದಾನ ಮಂಜೂರಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಸ್ತುಸ್ಥಿತಿ ಅರಿತು ಕಾರ್ಯ ನಿರ್ವಹಣೆ:

ಬರೀ ಕಾಟಾಚಾರಕ್ಕಾಗಿ ಅಂಕಿ ಅಂಶಗಳನ್ನು ಸಭೆಗೆ ಒಪ್ಪಿಸುವುದಕ್ಕಿಂತ ಆಯಾ ಇಲಾಖಾವಾರು ಅಧಿಕಾರಿಗಳು ನಿರ್ದಿಷ್ಟ ವಸ್ತು ಸ್ಥಿತಿ ಅರಿತುಕೊಂಡು ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ತೊಡಗಬೇಕು. ಬಿಡುಗಡೆಯಾಗಿರುವ ಅನುದಾನವನ್ನು ಅವೈಜ್ಞಾನಿಕವಾಗಿ ಹಾಗೂ ದುರುಪಯೋಗಪಡಿಸಿಕೊಳ್ಳುವುದು ಹೇಗೆ ಅಪರಾಧವೋ ಹಾಗೇ ಅನುದಾನ ಸಮಪರ್ಕ ಬಳಕೆಯಾಗದಿರುವುದು ಅಪರಾಧವೇ. ಹೀಗಾಗಿ ಜಿಲ್ಲಾ ಮತ್ತು ತಾಲೂಕಾ ಮಟ್ಟದ ಅಧಿಕಾರಿಗಳು ಅನುದಾನ ಬಳಕೆಯಲ್ಲಿ ಮುತುವರ್ಜಿವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅಧಿಕಾರಿಗಳಿಗೆ ತಿಳಿಸಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಅನುದಾನ ಬಳಕೆ:

ಪ್ರಸಕ್ತ ವರ್ಷದಲ್ಲಿ ಆಗಸ್ಟ್ ಅಂತ್ಯದ ವರೆಗೆ ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮಗಳಡಿ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಿರಿಸಲಾಗಿರುವ ಶೇ.24.10 ರಷ್ಟು ಅನುದಾನ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಮೀಸಲಿರಿಸಲಾಗಿರುವ ಶೇ.25 ರಷ್ಟು ಅನುದಾನ ಪ್ರಗತಿ ಸಂಬಂಧವಾಗಿ ಅಪರ ಜಿಲ್ಲಾಧಿಕಾರಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಎಲ್ಲೆಲ್ಲಿ ಅನುದಾನ ಸಮರ್ಪಕವಾಗಿ ವಿನಿಯೋಗವಾಗಿಲ್ಲ ಅನ್ನುವ ಬಗ್ಗೆ ತಿಳಿದುಕೊಂಡ ಅಪರ ಜಿಲ್ಲಾಧಿಕಾರಿ ಅವರು ಶೀಘ್ರವೇ ಅಗತ್ಯ ಕೆಲಸಗಳಿಗಾಗಿ ಅನುದಾನದ ವೈಜ್ಞಾನಿಕ ವಿನಿಯೋಗಕ್ಕೆ ಸೂಚಿಸಿದರು.

ಶೇ.100 ರಷ್ಟು ಸಾಧಿಸಿದ ಇಲಾಖೆಗೆ ಮೆಚ್ಚುಗೆ:

ಪಶುಸಂಗೋಪನೆ ಇಲಾಖೆ, ಸಹಕಾರ ಇಲಾಖೆ, ವಾರ್ತಾ ಇಲಾಖೆ ಸೇರಿದಂತೆ ಇತರ ಕೆಲವು ಇಲಾಖೆಗಳು ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮಗಳಡಿಯಲ್ಲಿ ಒದಗಿದ ಅನುದಾನವನ್ನು ಸದ್ಬಳಕೆ ಮಾಡಿಕೊಂಡಿವೆ. ಈ ಮೂಲಕ ನಿಗದಿತ ಗುರಿ ತಲುಪಿದ್ದು ಶೇ. 100 ಸಾಧನೆ ಕೈಗೊಂಡಿವೆ. ಹೀಗಾಗಿ ಶೇ.100 ರಷ್ಟು ಕಾರ್ಯಪ್ರಗತಿ ಸಾಧಿಸಿದ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪೌರ ಕಾರ್ಮಿಕರಿಗೆ ಮನೆ ಹಕ್ಕು ಪತ್ರ ನೀಡಿ:

ಮ್ಯಾನುವೆಲ್ ಸ್ಕಾö್ಯವೆಂರ‍್ಸ್ ನಿಷೇಧ ಮತ್ತು ಪುನರ್ವಸತಿ ಕಾಯ್ದೆ ಅನುಷ್ಠಾನದ ಕುರಿತು ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ಪೌರ ಕಾರ್ಮಿಕರಿಗೆ ವಸತಿ ಹಕ್ಕು ಪತ್ರಗಳನ್ನು ನೀಡಬೇಕು. ಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುವ 115 ಪೌರ ಕಾರ್ಮಿಕರನ್ನು ಖಾಯಂ ಗೊಳಿಸಬೇಕು. ಗುರುತಿನ ಚೀಟಿ ನೀಡುವಂತೆ, ಪಿಂಚಣಿಯಿಂದ ಮನೆ ಬಾಡಿಗೆ ಕಡಿತವಾಗದಂತೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಎಸ್‌ಸಿಪಿ, ಟಿಎಸ್‌ಪಿ ವರದಿ ಸಲ್ಲಿಕೆ:

ವಿವಿಧ ಇಲಾಖೆ, ಮಂಡಳಿ, ನಿಗಮಗಳ ಮೂಲಕ ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮಗಳ ಪ್ರತಿಶತ ಅನುಷ್ಠಾನದ ಕುರಿತಾಗಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ಅವರು ಸಭೆಯಲ್ಲಿ ವಿವರಿಸಿದರು. ವಿವಿಧ ಇಲಾಖೆ, ಮಂಡಳಿ, ನಿಗಮಗಳಲ್ಲಿ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನ, ಖರ್ಚುವೆಚ್ಚದ ಬಗ್ಗೆ ಅಧಿಕಾರಿ ಉಮಾ ಸಾಲಿಗೌಡರ ವಾಚನದೊಂದಿಗೆ ಸಭೆಗೆ ವರದಿ ಒಪ್ಪಿಸಿದರು

ನಾಮನಿರ್ದೇಶಿತ ಸದಸ್ಯ ಅಣ್ಣಾಸಾಹೇಬ ಹಂಚಿನಮನಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಾಹನಿಂಗ ನಂದಗಾಂವಿ, ಎಸಿಪಿ ಚಂದ್ರಪ್ಪ ಕಟ್ಟಿಮನಿ, ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ