Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಟಿಳಕವಾಡಿಯಲ್ಲಿ ಸದಾ ಚಿನ್ಮಯ ಸೌಹಾರ್ದ ಸಹಕಾರಿ ಬ್ಯಾಂಕಿನ ಎರಡನೇ ಶಾಖೆ ಉದ್ಘಾಟನೆ

ಬೆಳಗಾವಿ : ಟಿಳಕವಾಡಿ ಸೋಮವಾರಪೇಟೆ ಪಾಟೀಲ ಡೈರಿ ಎದುರುಗಡೆ ಸದಾ ಚಿನ್ಮಯ ಸೌಹಾರ್ದ ಸಹಕಾರಿ ಬ್ಯಾಂಕಿನ ಎರಡನೇ ಶಾಖೆಯ ಉದ್ಘಾಟನೆ ನೆರವೇರಿತು.

ಬೆಳಗಾವಿ ರಾಮಕೃಷ್ಣ ಮಿಷನ್ ಆಶ್ರಮದ ಪೂಜ್ಯ ಸ್ವಾಮಿ ನವದುರ್ಗಾನಂದಜೀ ಮಹಾರಾಜ ಅವರು ಶುದ್ಧ ಮನಸ್ಸಿನಿಂದ ಮಾಡುವ ಕಾರ್ಯಗಳು ಇಂತಹ ಯಶಸ್ಸನ್ನು ತಂದುಕೊಡುತ್ತವೆ ಎಂದರು.

ಸಂಸ್ಥೆಯ ಸಂಸ್ಥಾಪಕರಲ್ಲಿ ಒಬ್ಬರಾದ, ಕೆವಿಜಿ ಬ್ಯಾಂಕ್ ನಿವೃತ್ತ ಮುಖ್ಯ ವ್ಯವಸ್ಥಾಪಕ ಪಿ.ವಿ.ಪಾಟೀಲ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ಯಾಂಕ್ ಅಧ್ಯಕ್ಷ ಭೀಮಗೌಡ ಪೊಲೀಸಗೌಡರ್ ಅವರು ಶುಭ ಹಾರೈಸಿದರು. ನಿರ್ದೇಶಕರು ಹಾಗೂ ಮಾರ್ಗದರ್ಶಕರು, ಸಮಾಜ ಸೇವಕ ಪ್ರವೀಣ್ ಕುಮಾರ್ ಚಿಕ್ಕಲಿ ಅವರು ಬ್ಯಾಂಕಿನ ನಿಯಮಗಳು ಹಾಗೂ ಸಾಲ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಅಧ್ಯಕ್ಷೀಯ ಭಾಷಣ ಮಾಡಿದ ಮಲ್ಲಿಕಾರ್ಜುನ ಗುನುಗೊಳ್ ಅವರು ಈ ಶಾಖೆ ತಮ್ಮೆಲ್ಲರ ಸೇವೆಗೆ ಸದಾ ಸನ್ನದ್ಧವಾಗಿರುತ್ತದೆ. ಯುವಕರ ಅಭಿವೃದ್ಧಿ ನಮ್ಮ ಗುರಿ. ಯುವಕರಿಗಾಗಿ ನಾವು ಯಾವುದೇ ರೀತಿಯಲ್ಲಿ ಸಹಾಯ ಮಾಡಲು ಯಾವಾಗಲೂ ಸಿದ್ದ ಎಂದರು.

ಸಂಸ್ಥೆಗಾಗಿ ದುಡಿದ ಪ್ರಮುಖರಿಗೆ ಸತ್ಕಾರ ಮಾಡಲಾಯಿತು.

ಕಾರ್ಯಕ್ರಮಕ್ಕೆ ಬೆಳಗಾವಿಯ ವಿವಿಧ ಭಾಗಗಳಿಂದ 250 ಕ್ಕೂ ಹೆಚ್ಚು ಜನ ಆಗಮಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ