Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಖಡಕ್ ಎಚ್ಚರಿಕೆ- ಅನಾರೋಗ್ಯದ ಕಾರಣ ರಾಹುಲ್ ಗೈರು: ತಿರುಚಿ ಸುದ್ದಿ ಮಾಡಿದರೆ ಪತ್ರಿಕಾ ವೃತ್ತಿಯ ಬಗ್ಗೆ ಯಾವ ಸಂದೇಶ ಹೋಗುತ್ತದೆ: ಸಿ.ಎಂ ಪ್ರಶ್ನೆ

 

 

ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

*ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ*

ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು.

ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು.

ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು.

*ಕಾಂಗ್ರೆಸ್ ಸಂವಿಧಾನದ ಪರವಾಗಿದೆ*

ಗಾಂಧೀಜಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು.

ಸಂಸದೆ ಪ್ರಿಯಾಂಕ ಗಾಂಧಿ,
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಿದ್ದಾರೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

ಸ್ವಾಗತ :
ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನದ ಉದ್ಘಾಟನೆಗೆ ಆಗಮಿಸಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕಿ ಸಂಸದೆ ಪ್ರಿಯಾಂಕಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ