Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಧಾರ್ಮಿಕ ಕಾರ್ಯಕ್ರಮದಲ್ಲಿ ಮರದ ವೇದಿಕೆ ಕುಸಿದು ಏಳು ಮಂದಿ ಸಾವು ; 60 ಮಂದಿಗೆ ಗಾಯ

 

 

ಬಾಗ್ಪತ್: ಉತ್ತರ ಪರಾದೇಶದ ಬಾಗ್ಪತ್‌ ಜಿಲ್ಲೆಯ ಬದೌತ್‌ನಲ್ಲಿ ಮಂಗಳವಾರ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮರದ ರಚನೆಯೊಂದು ಕುಸಿದುಬಿದ್ದು ಏಳು ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 60 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಗ್ಪತ್ ಜಿಲ್ಲೆಯ ಬರೌತ್ ನಗರದ ಗಾಂಧಿ ರಸ್ತೆಯಲ್ಲಿರುವ ಶ್ರೀ ದಿಗಂಬರ ಜೈನ್ ಪದವಿ ಕಾಲೇಜು ಮೈದಾನದಲ್ಲಿ ಭಗವಾನ್ ಆದಿನಾಥರ ‘ಅಭಿಷೇಕ’ ಕಾರ್ಯಕ್ರಮದ ವೇಳೆ ಬೆಳಿಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಶ್ರೀ 1008 ಆದಿನಾಥ ಭಕ್ತಾಂಬರ ಪ್ರಚಾರಕರ ಆಶ್ರಯದಲ್ಲಿ ಜೈನ ಸಮುದಾಯದ ಮೋಕ್ಷ ಕಲ್ಯಾಣಕ ನಿರ್ವಾಣ ಮಹೋತ್ಸವದ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು.

ಗಾಯಗೊಂಡವರಲ್ಲಿ 20 ಮಂದಿಗೆ ಪ್ರಥಮ ಚಿಕಿತ್ಸೆ ನೀಡಿ ಡಿಸ್ಚಾರ್ಜ್‌ ಮಾಡಲಾಗಿದ್ದು, 39 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾನಸ್ತಂಭ ಕಾಂಪ್ಲೆಕ್ಸ್‌ನಲ್ಲಿ ನಿರ್ಮಿಸಲಾದ 65 ಅಡಿ ತಾತ್ಕಾಲಿಕ ವೇದಿಕೆಯ ಮರದ ಮೆಟ್ಟಿಲುಗಳು ಮುರಿದು ಬಿದ್ದಿದ್ದರಿಂದ ವೇದಿಕೆಯಲ್ಲಿದ್ದ ಭಕ್ತರು ಮತ್ತು ಮರದ ವೇದಿಕೆ ಅದರ ಬಳಿ ನಿಂತಿದ್ದವರ ಮೇಲೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಘಟನೆಯಲ್ಲಿ ಐದು ಮಂದಿ ಮೃತಟ್ಟಿದ್ದು, 39 ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಸ್ಮಿತಾ ಲಾಲ ಸುದ್ದಿಗಾರರಿಗೆ ತಿಳಿಸಿದ್ದರು. ಕಳೆದ 30 ವರ್ಷಗಳಿಂದ ಇಲ್ಲಿ ವಾರ್ಷಿಕ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ನಂತರ, ಚಿಕಿತ್ಸೆಯ ಸಮಯದಲ್ಲಿ ಇನ್ನೂ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಪಂಕಜ್ ವರ್ಮಾ ತಿಳಿಸಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. 39 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
ಕೆಲವು ಪ್ರತ್ಯಕ್ಷದರ್ಶಿಗಳು ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ಸಹಾಯವನ್ನು ಪಡೆಯಲು ಸಾಧ್ಯವಾಗಲಿಲ್ಲ ಮತ್ತು ಗಾಯಾಳುಗಳನ್ನು ಇ-ರಿಕ್ಷಾಗಳಲ್ಲಿ ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಆಯೋಜಕರ ವತಿಯಿಂದ ಅನುಮತಿ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರ್ಪಿತ್ ವಿಜಯವರ್ಗಿಯ ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಏತನ್ಮಧ್ಯೆ, ಘಟನೆಯ ನಂತರ ಸ್ಥಳದಲ್ಲಿ ಭೀತಿ ಆವರಿಸಿದ್ದು, ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಕಾರ್ಯಕ್ರಮದಲ್ಲಿ ನೆರೆದಿದ್ದವರ ಪ್ರಕಾರ ಮರದ ತಾತ್ಕಾಲಿಕ ವೇದಿಕೆಯ ಮೆಟ್ಟಿಲುಗಳು ಅಪಾರ ಭಕ್ತ ಸಮೂಹದ ಭಾರವನ್ನು ತಾಳಲಾರದೆ ಕುಸಿದುಬಿದ್ದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ