Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಶೋಧನಾ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಲೈಂಗಿಕ-ಮಾನಸಿಕ ಕಿರುಕುಳ RCU ವಿಶೇಷ ತುರ್ತು ಸಭೆಯಲ್ಲಿ ಪ್ರೊಫೆಸರ್ ಮೇಲೆ ನಿರ್ದಾಕ್ಷಿಣ್ಯ ಕ್ರಮ

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆದ 54ನೇ ವಿಶೇಷ ತುರ್ತು ಸಿಂಡಿಕೇಟ್ ಸಭೆ ಪ್ರಾಧ್ಯಾಪಕರೊಬ್ಬರ ಮೇಲೆ ಕೇಳಿ ಬಂದ ಲೈಂಗಿಕ ಆರೋಪದ ಹಿನ್ನೆಲೆಯಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ.

ಈ ಸಿಂಡಿಕೇಟ್ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು ಮತ್ತು ಎಲ್ಲಾ ಸಿಂಡಿಕೇಟ್ ಸದಸ್ಯರು ಹಾಜರಿದ್ದರು. ವಿಶ್ವವಿದ್ಯಾಲಯದ ವಿಜಯಪುರದ ಸ್ನಾತಕೋತ್ತರ ಪದವಿ ಕೇಂದ್ರದಲ್ಲಿ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೊ. ಕೆಎಲ್ಎನ್ ಮೂರ್ತಿ ಇವರ ವಿರುದ್ಧ ಸಂಶೋಧನಾ ವಿದ್ಯಾರ್ಥಿನಿ ಒಬ್ಬರು ಪ್ರಾಧ್ಯಾಪಕರ ವಿರುದ್ಧ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿರುವ ದೂರು ನೀಡಿದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯವು Sexual harassment of women at workplace (prevention prohibition and redressal) act 2013 and UGC (prevention prohibition and redressal of sexual harassment etc) regulations 2015 ರಡಿಯಲ್ಲಿ ರಚಿಸಲಾಗಿರುವ ಆಂತರಿಕ ಸಮಿತಿ ವಿವರವಾಗಿ ತನಿಖೆಯನ್ನು ಮಾಡಿ ತನಿಖಾ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಆರೋಪಗಳು ರುಜುವಾತು ಆಗಿರುವ ಬಗ್ಗೆ ಸ್ಪಷ್ಟ ವರದಿ ನೀಡಿದ ಹಿನ್ನೆಲೆಯಲ್ಲಿ ಆರೋಪಿತ ಪ್ರಾಧ್ಯಾಪಕರನ್ನು ಸೇವೆಯಿಂದ ಅಮಾನತ್ತುಗೊಳಿಸಿರುವುದನ್ನು ಸಭೆಯು ಒಕ್ಕೊರಲಿನಿಂದ ಸ್ವಾಗತಿಸಿ, ಅನುಸಮರ್ಥನೆ ನೀಡಿತು.

ಸಿಂಡಿಕೇಟ್ ಸದಸ್ಯರಾದ ಈರಣ್ಣ ಹಪ್ಪಳಿ, ವಿನೀತ್ ಜೋಶಿ, ಮಹಾಂತೇಶ್ ಕಂಬಾರ, ಡಾ. ಕಾವೇರಿ ಎಚ್ಎಂ, ರಫಿ ಬಂಡಾರಿಯವರು ಹಾಗೂ ಉಳಿದೆಲ್ಲಸದಸ್ಯರು ಈ ಪ್ರಕರಣದಲ್ಲಿ exemplary ರೀತಿಯ ಕ್ರಮ ಕೈಗೊಂಡು ವಿಶ್ವವಿದ್ಯಾಲಯದಿಂದ ಒಳ್ಳೆಯ ಸಂದೇಶ ರವಾನಿಸುವುದು ಸೂಕ್ತ. Suspension is not a punishment ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಮುಂದೆ ಈ ಘಟನೆಗಳು ವಿಶ್ವವಿದ್ಯಾಲಯ ಅಥವಾ ಯಾವುದೇ ಸಂಯೋಜಿತ ಮಹಾವಿದ್ಯಾಲಯ ಅಥವಾ ಯಾವುದೇ ಕಚೇರಿ ವ್ಯಾಪ್ತಿಯಲ್ಲಿ ಮರುಕಳಿಸದಂತೆ ನೋಡಿಕೊಳ್ಳಲು ಸರ್ಕಾರದ ಆದೇಶ ಮತ್ತು UGC, ಸೇವಾ ನಿಯಮಾವಳಿಗಳ ಪ್ರಕಾರ ಇವರನ್ನು ಸೇವೆಯಿಂದ ಟೆರ್ಮಿನೇಷನ್ ಮಾಡಲು ಅಥವಾ ಟೆಂಪರರಿ ರಿಮೂವಲ್ ಮಾಡುವ ಬಗ್ಗೆ ನಿರ್ಣಯ ಅಂಗೀಕರಿಸಿ, ಸದರಿ ಮಾಹಿತಿಯನ್ನು ಸರ್ಕಾರಕ್ಕೆ ಮತ್ತು ಗೌರವಾನ್ವಿತ ರಾಜ್ಯಪಾಲರಿಗೆ ಮಾಹಿತಿ ಸಲ್ಲಿಸಲು ತೀರ್ಮಾನಿಸಿದರು. ಪ್ರಕರಣದ ಬಗ್ಗೆ ವಿವರವಾದ ತನಿಖೆ ನಡೆಸಲು ಸಿಂಡಿಕೇಟ್ ನಿರ್ಣಯಿಸಿರುತ್ತದೆ. ಶಿಸ್ತು ಕ್ರಮವನ್ನು ಜರುಗಿಸುವಲ್ಲಿ ಯಾವುದೇ ಕಾನೂನಾತ್ಮಕ ತೊಂದರೆಗಳಾಗದಂತೆ ಕ್ರಮವಹಿಸಲು ಸಿಂಡಿಕೇಟ್ ತೀರ್ಮಾನಿಸಿರುತ್ತದೆ. ಎಲ್ಲಾ ಸಂಶೋಧನಾ ವಿದ್ಯಾರ್ಥಿಗಳಿಗೆ, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಕಾನೂನು ಮತ್ತು ರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಸಿಂಡಿಕೇಟ್ ತೀರ್ಮಾನಿಸಿದೆ. ಆಂತರಿಕವಾಗಿ ವಿಶ್ವವಿದ್ಯಾಲಯದಲ್ಲಿ ಇಂಟಲಿಜೆನ್ಸ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸಭೆಯು ತೀರ್ಮಾನಿಸಿರುತ್ತದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ