Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತದಾನ ಹೆಚ್ಚಳಕ್ಕೆ ಕ್ರಮ : ಶ್ಯಾಮಿಯಾನ ಹಾಕಿ ನೆರಳಿನ ವ್ಯವಸ್ಥೆ

 

ಬೆಳಗಾವಿ :
ವಿಧಾನಸಭಾ ಚುನಾವಣೆ-2023ರ ಹಿನ್ನೆಯಲ್ಲಿ ಮತದಾನ ಜಾಗೃತಿ ಕುರಿತು ಜಿಲ್ಲೆಯಾದ್ಯಾಂತ ವಿವಿಧ ಸ್ವೀಪ್ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕಳೆದ ಬಾರಿ ಕಡಿಮೆ ಮತದಾನವಾಗಿರುವ ಪ್ರದೇಶಗಳನ್ನು ಗುರುತಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಚುನಾವಣೆಯ ಕುರಿತು ಚಿತ್ರಕಲಾ ಸ್ಪರ್ಧೆ ಪ್ರಬಂಧ ಸ್ಪರ್ಧೆ, ವಿವಿಧ ಸರ್ಕಾರಿ ಇಲಾಖೆಯ ಸಿಬ್ಬಂದಿಗಳಿಂದ ಬೈಕ್ ಜಾಥಾ, ಕ್ಯಾಂಡಲ್ ಜಾಥಾ, ಲಿಂಗತ್ವ ಅಲ್ಪ ಸಂಖ್ಯಾತರಿಗೆ ಹಾಗೂ ವಿಶೇಷ ಚೇತನರ ಬೈಕ್ ಜಾಥಾ ಮೂಲಕ ಮತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಮೇ-10 ಮತದಾನ ದಿನದಂದು ವಿಶೇಷ ಚೇತನರು ಮತ್ತು ವಯಸ್ಕರ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರಿನ ವ್ಯವಸ್ಥೆ, ಶ್ಯಾಮಿಯಾನ ಮೂಲಕ ನೆರಳಿನ ವ್ಯವಸ್ಥೆ ಹಾಗೂ ಶೌಚಾಲಯದ ವ್ಯವಸ್ಥೆ ವಿಶೇಷ ಚೇತನರಿಗೆ ವ್ಹಿಲ್ ಚೇರ್ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ಕೆಲವು ವಿಶೇಷ ಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟ ಮತದಾನರಿಗೆ ಮನೆಯಲ್ಲಿ ಮತದಾನ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು. ಮತದಾನದ ದಿನದಂದು ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತದಾರರ ಮನೆಗಳಿಗೆ ತೆರೆಳಿ ಮತದಾನ ಮಾಡುವ ಸಮಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಮತದಾನ ಮಾಡಿಸುತ್ತಾರೆ.

ಜಿಲ್ಲೆಯಲ್ಲಿ ಅಂದಾಜು 1 ಲಕ್ಷದಷ್ಟು ಜನರು 80 ವರ್ಷ ಮೆಲ್ಪಟ್ಟ ಮತದಾರು ಮತ್ತು 40 ಸಾವಿರ ವಿಶೇಷ ಚೇತನರು ಮತದಾರರು ಇರುವುದರಿಂದ ಅಂತಹ ಮತದಾರಿಗೆ ಮತದಾನದ ಮಾಡಲಿಕ್ಕೆ ಬೇಕಾಗುವ ಎಲ್ಲ ವ್ಯವಸ್ಥೆಯನ್ನು ಕಲ್ಪಿಸುವ ಜೊತೆಗೆ ಮಾಹಿತಿಯನ್ನು ನೀಡಲಾಗುತ್ತಿದೆ.
ಮತದಾರರು ಯಾವದೇ ಆಸೆ ಆಮಿಷಕ್ಕೆ ಒಳಗಾಗದೆ ತಮ್ಮ ಮತದಾನ ಹಕ್ಕನ್ನು ಚಲಾಯಿಸಬೇಕು. ಸುಗಮ ಮತ್ತು ಸುವ್ಯವಸ್ಥೆಯಿಂದ ಮತದಾನ ಜರಗಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯೊಂದಿಗೆ ಸಾರ್ವಜನಿಕರು ಮತ್ತು ಮತದಾರರು ಸಹಕರಿಸಬೇಕೆಂದು ಅಧ್ಯಕ್ಷರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೊಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ