Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲೈಂಗಿಕ ದೌರ್ಜನ್ಯದ ದೃಶ್ಯಗಳ ಪೆನ್ ಡ್ರೈವ್‌ ಹಂಚಿರುವುದು ಪಾಪದ ಕೆಲಸ: ಹೈಕೋರ್ಟ್‌ ಬೇಸರ

 

ಬೆಂಗಳೂರು : “ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ದೃಶ್ಯ ಒಳಗೊಂಡ ಪೆನ್ ಡ್ರೈವ್‌ ವಿತರಿಸಿರುವುದು ಅತ್ಯಂತ ಅಪಾಯಕಾರಿ ಮತ್ತು ಪಾಪದ ಕೆಲಸ. ಇಂಥ ಕೆಲಸದಿಂದ ಮಹಿಳೆ ಅಪಮಾನಕ್ಕೆ ಒಳಗಾಗುತ್ತಾಳೆ” ಎಂದು ಮೌಖಿಕವಾಗಿ ಕರ್ನಾಟಕ ಹೈಕೋರ್ಟ್‌ ಸೋಮವಾರ ಬೇಸರ ವ್ಯಕ್ತಪಡಿಸಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣರ ಲೈಂಗಿಕ ಹಗರಣ ಸಂಬಂಧದ ಪೆನ್ ಡ್ರೈವ್ ವಿತರಿಸಿದ ಪ್ರಕರಣದ ಪ್ರಮುಖ ಆರೋಪಿ ಹಾಸನದ ಶರತ್ ತನ್ನ ವಿರುದ್ಧದ ಪ್ರಕರಣ ರದ್ದುಗೊಳಿಸಲು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಬೇಸರ ವ್ಯಕ್ತಪಡಿಸಿತು ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.

ವಾದ ಆಲಿಸಿದ ಬಳಿಕ ನ್ಯಾಯಾಲಯವು ಸದ್ಯಕ್ಕೆ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಆರೋಪಿ ತನಿಖಾಧಿಕಾರಿ ಮುಂದೆ ಹಾಜರಾಗಬೇಕು ಎಂದು ಪೀಠವು ತಿಳಿಸಿತು. ಅದಕ್ಕೆ ಆರೋಪಿ ಪರ ವಕೀಲ ಪವನ್‌ ಚಂದ್ರ ಶೆಟ್ಟಿ ಅವರು ಬಂಧಿಸದಂತೆ ಆದೇಶ ಮಾಡಬೇಕು ಎಂದು ಕೋರಿದರು.
ಆಗ ಪೀಠವು “ಈ ನ್ಯಾಯಾಲಯವನ್ನು ಜಾಮೀನು ನೀಡುವ ನ್ಯಾಯಾಲಯವನ್ನಾಗಿ ಪರಿಗಣಿಸಬಾರದು. ಮೊದಲು ನಿರೀಕ್ಷಣಾ ಜಾಮೀನು ಅಥವಾ ಸಾಮಾನ್ಯ ಜಾಮೀನು ಪಡೆದುಕೊಳ್ಳಿ ಇಲ್ಲವೇ ತನಿಖಾಧಿಕಾರಿ ಮುಂದೆ ಹಾಜರಾಗಿ. ಅಲ್ಲಿಯವರೆಗೆ ಈ ಅರ್ಜಿ ವಿಚಾರಣೆ ನಡೆಸುವುದಿಲ್ಲ” ಎಂದು ಅರ್ಜಿ ವಿಚಾರಣೆ ಮುಂದೂಡಿತು ಎಂದು ವರದಿ ಹೇಳಿದೆ.

ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು ತನಿಖಾ ವರದಿಯ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಶರತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಹೇಳಿದರು. ಅರ್ಜಿದಾರರ ಪರ ವಕೀಲ ಪವನ್‌, “ಶರತ್ ಕುರಿತು ಕೇವಲ ಮಾಹಿತಿ ಇದೆ ಎಂದು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗದು. ಆರೋಪಿ ವಿರುದ್ಧ ಕಳೆದ 30 ದಿನಗಳಿಂದ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಪ್ರಕರಣ ರದ್ದು ಕೋರಲಾಗಿದೆ. ಈಗ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ” ಎಂದರು.
ಇದಕ್ಕೆ ಆಕ್ಷೇಪಿಸಿದ ಜಗದೀಶ್ ಅವರು “ಪೆನ್ ಡ್ರೈವ್‌ಗಳ ಕಾಪಿ ಮತ್ತು ವಿತರಣೆ ಪ್ರಕರಣದಲ್ಲಿ ಅರ್ಜಿದಾರ ಪ್ರಮುಖ ವ್ಯಕ್ತಿ. ಹೀಗಾಗಿ, ನ್ಯಾಯಾಲಯ ಯಾವುದೇ ಪರಿಹಾರ ನೀಡಬಾರದು” ಎಂದು ಕೋರಿದರು.
ಆಗ ಪವನ್‌ ಅವರು “ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಅರ್ಜಿದಾರರನ್ನು ಗುರಿ ಮಾಡಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ” ಎಂದರು.

ಇದಕ್ಕೆ ಪೀಠವು “ಇರಲಿ ಬಿಡಿ. ಯಾವುದೇ ವ್ಯಕ್ತಿ ಇಂತಹ ಕೆಲಸ ಮಾಡಿರಲಿ ಅದು ಮಹಾ ಪಾಪ. ಮಹಿಳೆಯನ್ನು ಯಾರೂ ಕೆಟ್ಟದಾಗಿ ಬಿಂಬಿಸಬಾರದು, ಅಂತಹ ಕೆಲಸ ಅಪಾಯಕಾರಿ. ನೀವು ಮಹಿಳೆಯನ್ನು ಕೆಟ್ಟದಾಗಿ ಚಿತ್ರಿಸಿದರೆ, ಅದು ಯಾವ ಸನ್ನಿವೇಶನದಲ್ಲಿ, ಹೇಗೆ ಆಯಿತು ಎಂಬುದು ನಿಮಗೆ ತಿಳಿದಿರುವುದಿಲ್ಲ. ಆದರೆ ಮಹಿಳೆ ಅಪಮಾನಕ್ಕೆ ಗುರಿಯಾಗಬೇಕಾಗುತ್ತಾಳೆ” ಎಂದಿತು.
ಪ್ರಕರಣದ ಹಿನ್ನೆಲೆ: ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಏಪ್ರಿಲ್‌ 23ರಂದು ಜೆಡಿಎಸ್‌-ಬಿಜೆಪಿ ಚುನಾವಣಾ ಏಜೆಂಟ್‌ ಎಂ ಜಿ ಪೂರ್ಣಚಂದ್ರ ತೇಜಸ್ವಿ ಹಾಸನದ ಸೆನ್‌ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶರತ್‌, ಬೇಲೂರಿನ ಕಾಂಗ್ರೆಸ್‌ ಕಾರ್ಯಕರ್ತ ಚೇತನ್‌, ನವೀನ್‌ ಗೌಡ ಅಲಿಯಾಸ್‌ ನವೀನ್‌ ಕುಮಾರ್‌ ಎನ್‌ ಆರ್‌, ಹೊಳೆನರಸೀಪುರ ತಾಲ್ಲೂಕಿನ ಕಾರ್ತಿಕ್‌ ಮತ್ತು ಪುಟ್ಟರಾಜು ವಿರುದ್ಧ ಐಪಿಸಿ ಸೆಕ್ಷನ್‌ 171­ಜಿ, ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 67(ಎ) ಅಡಿ ಪ್ರಕರಣ ದಾಖಲಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ