Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊಲ್ಲಾಪುರದಲ್ಲಿ ಕರ್ನಾಟಕದ ಬಸ್ ಗಳಿಗೆ ಭಗವಾ ಧ್ವಜ ಕಟ್ಟಿ,‌ ಮಸಿ ಬಳಿದ ಶಿವಸೇನೆ

ಬೆಳಗಾವಿ : ಕರ್ನಾಟಕ ರಾಜ್ಯ ಸಾರಿಗೆ ಬಸ್ ಮೇಲೆ ಭಗವಾ ಧ್ವಜವನ್ನು ಕಟ್ಟಿ ಬಸ್ಸಿಗೆ ಕರಿ‌ ಮಸಿ ಬಳಿದ ಶಿವಸೇನೆ ಕಾರ್ಯಕರ್ತರು ಕರ್ನಾಟಕ ಸರಕಾರ ಮತ್ತು ಕರವೇ ವಿರುದ್ದ ಘೋಷಣೆ ಹಾಕಿರುವ ಘಟನೆ ಕೊಲ್ಲಾಪುರದಲ್ಲಿ ನಡೆದಿದೆ.


ಶುಕ್ರವಾರ ಬೆಳಗಾವಿಯಿಂದ ಸುಳೇಭಾವಿಗೆ ಹೊರಟಿದ್ದ ನಗರ ಸಂಚಾರಿ ಬಸ್ ನಲ್ಲಿ ಮರಾಠಿ ಮಾತನಾಡದ ಬಸ್ ಕಂಡಕ್ಟರ್ ಮೇಲೆ ಕೆಲ ಪುಂಡರು ಹಲ್ಲೆ ನಡೆಸಿದ್ದರು. ಇದರ ವಿರುದ್ದ ಕೊಲ್ಹಾಪುರದಲ್ಲಿ ಕರ್ನಾಟಕ ಬಸ್ ತಡೆದು ಪುಂಡಾಟ ನಡೆಸಲಾಗಿದೆ. ಕೊಲ್ಹಾಪುರ ಶಿವಸೇನೆ (ಠಾಕ್ರೆ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯ ಸರಕಾರ ಮತ್ತು ಕರವೇ ಕಾರ್ಯಕರ್ತ ವಿರೋಧ ಘೋಷಣೆ ಹಾಕಿ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
ಕೊಲ್ಹಾಪುರದಿಂದ ಕರ್ನಾಟಕಕ್ಕೆ ಆಗಮಿಸುವ ಬಸ್ ಗಳ ಸಂಚಾರ ಸ್ಥಗಿತ ಮಾಡಲಾಗಿದೆ.

ಮಹಾರಾಷ್ಟ್ರ ಬಸ್ ತಡೆದು ಚಾಲಕನ ಮುಖಕ್ಕೆ ಮಸಿ: 10 ಮಂದಿ ಕಾರ್ಯಕರ್ತರ ಬಂಧನ

ಚಿತ್ರದುರ್ಗ: ಮರಾಠಿ ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಬಸ್‌ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಘಟನೆ ಖಂಡಿಸಿ ನವ ನಿರ್ಮಾಣ ಸೇನೆ ಕಾರ್ಯಕರ್ತರು ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ- 48ರ ಗುಯಿಲಾಳ ಟೋಲ್‌ನಲ್ಲಿ ಮಹಾರಾಷ್ಟ್ರ ಬಸ್ ತಡೆದು ಚಾಲಕನಿಗೆ ಮಸಿ ಬಳಿದಿದ್ದಾರೆ. ಘಟನೆ ಸಂಬಂಧ ಐಮಂಗಲ ಠಾಣೆ ಪೊಲೀಸರು ಶನಿವಾರ 10 ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಮರಾಠಿಗರು ಪುಂಡಾಟ ನಡೆಸಿದ್ದಾರೆ ಎಂದು ಆರೋಪಿಸಿ ನವನಿರ್ಮಾಣ ಸೇನೆ ಸದಸ್ಯರು ಹಿರಿಯೂರು ತಾಲ್ಲೂಕು ಗುಯಿಲಾಳ ಟೋಲ್ ಬಳಿ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ ತಡೆದ ಕಾರ್ಯಕರ್ತರು ಇಡಿ ಬಸ್‌ಗೆ ಕಪ್ಪು ಬಣ್ಣದ ಸ್ಪೇ ಸಿಂಪಡಿಸಿದರು. 'ಜೈ ಕರ್ನಾಟಕ, ಜೈ ಕನ್ನಡ, ಬೆಳಗಾವಿ ನಮ್ಮದು ಮರಾಠಿಗರು ಪುಂಡಾಟಿಕೆ ನಿಲ್ಲಿಸಬೇಕು' ಎಂದು ಬಸ್ ಮೇಲೆ ಬರೆದರು. ಬಸ್ ಚಾಲಕ ಹರಿ ಜಾದವ್ ಮುಖಕ್ಕೂ ಮಸಿ ಬಳಿದರು.

ಚಾಲಕ ಐಮಂಗಲ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿನವ ನಿರ್ಮಾಣ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ, ಮುಖಂಡ ಲಕ್ಷ್ಮಿಕಾಂತ್ ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ