Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಿಂಚಣಿ ಮಠದ 10ನೇ ಪೀಠಾಧಿಕಾರಿಯಾಗಿ ಶಿವಪ್ರಸಾದ ದೇವರು ಆಯ್ಕೆ ಪೀಠಾಧಿಪತಿ ಎಲ್ಲಿಯವರು ?

Advertisement
ಬೆಳಗಾವಿ : ಕನ್ನಡ ಮಠ ಎಂದೇ ಖ್ಯಾತಿ ಪಡೆದುಕೊಂಡಿರುವ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಅಲ್ಲಮಪ್ರಭುಸಿದ್ದ ಸಂಸ್ಥಾನ ಮಠದ 10 ನೇ ಪೀಠಾಧಿಕಾರಿಯಾಗಿ ಶಿವಪ್ರಸಾದ ದೇವರು ಅವರನ್ನು ಹುಬ್ಬಳ್ಳಿಯ ಮೂರು ಸಾವಿರ ಮಠದ ಆವರಣದಲ್ಲಿ ನಡೆದ ಸಭೆಯಲ್ಲಿ ಚಿಂಚಣಿ ಮಠದ ನೂರಾರು ಭಕ್ತರ ಸಮ್ಮುಖದಲ್ಲಿ ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ದ ರಾಜಯೋಗೇಂದ್ರ ಸ್ವಾಮೀಜಿ ಆಯ್ಕೆ ಮಾಡಿ ಘೋಷಿಸಿದರು.

ಹಾವೇರಿಯ ಹುಕ್ಕೇರಿ ಮಠದ ಮಠಾಧೀಶ, ಶಿವಯೋಗ ಮಂದಿರದ ಉಪಾಧ್ಯಕ್ಷ ಸದಾಶಿವ ಸ್ವಾಮೀಜಿ ಉತ್ತರಾಧಿಕಾರಿ ಪತ್ರವನ್ನು ಸಭೆಯಲ್ಲಿ ಓದಿದರು.

ಮಠದ 9ನೇ ಪೀಠಾಧಿಪತಿ ಅಲ್ಲಮಪ್ರಭು ಸ್ವಾಮೀಜಿ 2023ರ ನ. 12 ರಂದು ಲಿಂಗೈಕ್ಯರಾಗಿದ್ದರಿಂದ ತೆರವಾಗಿದ್ದ ಪೀಠಕ್ಕೆ ವಿಜಯಪುರ ಜಿಲ್ಲೆಯ ಯರನಾಳ ಗ್ರಾಮದ ಶಿವಪ್ರಸಾದ ದೇವರು ಅವರನ್ನು ಆಯ್ಕೆ ಮಾಡಲಾಗಿದೆ.

ತಂದೆ ಷಡಕ್ಷರಯ್ಯ, ತಾಯಿ ಶಶಿಕಲಾ. ಶಿವಪ್ರಸಾದ ಹಿರೇಮಠ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ ಪೂರೈಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಶಿವಯೋಗ ಮಂದಿರದಲ್ಲಿ ಐದು ವರ್ಷಗಳ ಕಾಲ ಯೋಗ, ಶಿವಯೋಗ, ವಚನ, ಸಂಗೀತ, ಸಾಹಿತ್ಯ ಪ್ರವಚನ, ಪೂಜೆ ಮುಂತಾದವುಗಳನ್ನು ಕರಗತ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಜಗದ್ಗುರು ಮೂರು ಸಾವಿರ ಮಠದ ಮಹಾವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿದ್ದಾರೆ. ಇದೀಗ ಅತ್ಯಂತ ಸಣ್ಣ ವಯಸ್ಸಿನಲ್ಲೇ ನಾಡಿನ ಬಹುದೊಡ್ಡ ಮಠದ ಜವಾಬ್ದಾರಿಯನ್ನು ಅವರು ವಹಿಸಿಕೊಳ್ಳುತ್ತಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಹಲವೆಡೆ ಇಂದು ಭಾರಿ ಮಳೆ ಸಾಧ್ಯತೆ: ರೆಡ್ ಅಲರ್ಟ್ ಘೋಷಣೆ10 ಗಂಟೆ ಒಳಗೆ ಕಚೇರಿಯಲ್ಲಿರಿರಾಜ್ಯಸಭೆ, ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನ