Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂಡಿಯಾ ಮೈತ್ರಿಯಿಂದ ಹೊರಬಂದ ಎಎಪಿ; ಕಾಂಗ್ರೆಸ್‌ ಗೆ ಶಾಕ್

ನವದೆಹಲಿ: ಅರವಿಂದ್ ಕೇಜ್ರಿವಾಲ್ ನಾಯಕತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟದಿಂದ ಹೊರಬಂದಿದೆ.

ಮುಂಗಾರು ಅಧಿವೇಶನ ಹಿನ್ನೆಲೆಯಲ್ಲಿ ಇಂಡಿಯಾ ಮೈತ್ರಿಕೂಟ ಸಭೆ ಕರೆದಿತ್ತು. ಈ ಸಭೆಗೂ ಮುನ್ನವೇ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಎಎಪಿ ಶಾಕ್ ನೀಡಿದೆ.

ಸುದ್ದಿ ಸಂಸ್ಥೆಗಳೊಂದಿಗೆ ಮಾತನಾಡಿದ ಎಎಪಿ ಸಂಸದ ಸಂಜಯ್ ಸಿಂಗ್ 'ಇಂಡಿಯಾ' ಒಕ್ಕೂಟದಿಂದ ಎಎಪಿ ಹೊರ ಬಂದಿದೆ, ಇನ್ನು ಮುಂದೆ ಎಎಪಿ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ ಎಂಬುದನ್ನು ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಅವರು ಹೇಳಿದರು.

2024ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಇಂಡಿಯಾ ಒಕ್ಕೂಟದ ಭಾಗವಾಗಿತ್ತು. ನಂತರ ನಡೆದ ಹರಿಯಾಣ, ದೆಹಲಿ ವಿಧಾನಸಭಾ ಚುನಾವಣೆ ಹಾಗೂ ಉಪಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಿತ್ತು. ಇದೀಗ ಮೈತ್ರಿಕೂಟದಿಂದ ಸಂಪೂರ್ಣವಾಗಿ ಹೊರ ಬಂದಿದ್ದೇವೆ. ಇಂದು ನಡೆಯಲಿರುವ ಇಂಡಿಯಾ ಕೂಟದ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ಹೇಳಿದರು.

ಬಿಹಾರ, ದೆಹಲಿ, ಉತ್ತರಪ್ರದೇಶ ಮತ್ತು ಪೂರ್ವಾಂಚಲಗಳಲ್ಲಿ ಜನರ ಮನೆಗಳು ಮತ್ತು ಅಂಗಡಿಗಳನ್ನು ನಾಶಮಾಡುತ್ತಿರುವುದು, ದೆಹಲಿಯಲ್ಲಿ ಕೊಳೆಗೇರಿಗಳ ಧ್ವಂಸ ಮಾಡುತ್ತಿರುವುದನ್ನು ಸದನದಲ್ಲಿ ಪ್ರಶ್ನೆ ಮಾಡಲಾಗುವುದು ಎಂದು ಸಂಜಯ್ ಸಿಂಗ್ ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ