Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಗುಂಡಿನ ದಾಳಿ

ಬೆಳಗಾವಿ : ನಗರದ ಪೊಲೀಸ್ ಕಮೀಷನರ್ ಕಚೇರಿ ಸನಿಹದ ಜಿಮಖಾನಾ ಕ್ಲಬ್‌ನಲ್ಲಿ ಮಂಗಳವಾರ ಗುಂಡಿನ ದಾಳಿ ನಡೆದಿದೆ. ವ್ಯಕ್ತಿಯೊಬ್ಬರ ಹತ್ಯೆಗೆ ಯತ್ನಿಸಿದ ಘಟನೆ ಇದಾಗಿದೆ.

ರಮ್ಮಿ ಆಡುತ್ತಿದ್ದ ವೇಳೆ ಸುರೇಶ ಜಾಲಗಾರ ಎಂಬಾತನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಆರೋಪಿಗಳು ಮೊದಲು ಗನ್‌ನಿಂದ ತಲೆಗೆ ಹೊಡೆದು ಬಳಿಕ ಗುಂಡು ಹಾರಿಸಲು ಯತ್ನಿಸಿದ್ದಾರೆ. ಆದರೆ ಸುರೇಶ ಅವರನ್ನು ತಳ್ಳಿ ತಪ್ಪಿಸಿಕೊಂಡು ಸ್ಥಳದಿಂದ ಪಾರಾಗಿದ್ದಾರೆ.

ಸುರೇಶ ತಪ್ಪಿಸಿಕೊಂಡ ಬಳಿಕ ದುಷ್ಕರ್ಮಿಗಳು ಕ್ಲಬ್‌ನ ಹೊರಭಾಗದಲ್ಲಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಮಾಹಿತಿಯ ಪ್ರಕಾರ, ಐವರು ದುಷ್ಕರ್ಮಿಗಳು ಜಿಮಖಾನಾ ಕ್ಲಬ್‌ಗೆ ಬಂದಿದ್ದು, ಅವರಲ್ಲಿ ಇಬ್ಬರು ಹೊರಗಡೆ ನಿಂತರೆ, ಮೂವರು ಒಳಗೆ ಪ್ರವೇಶಿಸಿ ದಾಳಿ ನಡೆಸಿದ್ದಾರೆ.

ಘಟನೆಯ ಮಾಹಿತಿ ತಿಳಿದು ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಸುರೇಶ ಜಾಲಗಾರ ಓಡಿ ಬಂದು ಪೊಲೀಸರ ಆಶ್ರಯ ಪಡೆದಿದ್ದಾರೆ. ಬಳಿಕ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಕ್ಯಾಂಪ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಹಿಂದೆ ಪ್ರ ಫುಲ್ ಪಾಟೀಲ ಎಂಬಾತನ ಮೇಲೆ ಸುರೇಶ ಜಾಲಗಾರ ಗುಂಡಿನ ದಾಳಿ ನಡೆಸಿದ್ದ ಎನ್ನಲಾಗಿದ್ದು, ಅದಕ್ಕೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಪ್ರಫುಲ್ ಪಾಟೀಲ ಪರ ಇದ್ದವರು ಈ ದಾಳಿ ನಡೆಸಿದ್ದಾರೆ ಎಂದು ಸುರೇಶ ಪೊಲೀಸರಿಗೆ ತಿಳಿಸಿದ್ದಾರೆ.

ಘಟನೆ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಗುಂಡಿನ ದಾಳಿ ಕಕ್ಕೇರಿಯ ಭಿಷ್ಟಾದೇವಿ ಹಾಗೂ ಸಹೋದರಿ ಮೂಕಮ್ಮದೇವಿ ಮಂದಿರಕ್ಕೆ ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ತ ಭಕ್ತರ ದಂಡುಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವುನೈರುತ್ಯ ವಲಯದ ರೇಲ್ವೆ ಅಧಿಕಾರಿಗಳು ಹಾಗೂ ಘಟಪ್ರಭಾ ನಿವಾಸಿಗಳೊಂದಿಗೆ ಸಂಸದ ಶೆಟ್ಟರ ಸಭೆಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಉಂಟಾದ ಜಗಳ : ಪಿಕಾಸಿಯಿಂದ  ಕೊಚ್ಚಿ ಕೊಲೆ-ಗಂಟೆಯಲ್ಲೇ ಆರೋಪಿ ಬಂಧನಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ: ವದಂತಿಗಳಿಗೆ ಕಿವಿಗೊಡದಂತೆ ಮನವಿಸಾರ್ವಜನಿಕರಲ್ಲಿ ಪೊಲೀಸರ ಮನವಿ : ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಆರೋಪಿಗಳ ಬಂಧನಸಸ್ಯಾಹಾರದ ಬದಲು ಮಾಂಸಾಹಾರ : ಸೇವಾನ್ಯೂನತೆ ಎಸಗಿದ ಜೊಮೊಟೋ ಸಂಸ್ಥೆಗೆ ಜಿಲ್ಲಾ ಗ್ರಾಹಕ ಆಯೋಗದಿಂದ ದಂಡಹೊಸ ತಿರುವು : ಕರ್ನಾಟಕ ಪರ ಗೊತ್ತುವಳಿ ಅಂಗೀಕರಿಸುವವರೆಗೂ ಅನುದಾನ ಬಿಡುಗಡೆ ಮಾಡದಂತೆ ಕನ್ನಡ ಸಂಘಟನೆಗಳ ಒಕ್ಕೊರಲ ಮನವಿ ಕದ್ದು ಮುಚ್ಚಿ ಸಿಎಂ ಭೇಟಿತಂದೆ-ತಾಯಿ ಕೊಂದಿದ್ದ ಆನೆಯಿಂದ ಪಾರಾಗಲು 2 ನದಿ ದಾಟಿ ಬಂದಿದ್ದ ಕುಟುಂಬ; 14 ವರ್ಷದ ಬಳಿಕ ಅಲ್ಲಿಗೂ ಬಂದು ಮತ್ತಿಬ್ಬರನ್ನು ಸಾಯಿಸಿದ ಅದೇ ಆನೆ