Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮದುವೆಯಾದ ಕೆಲವೇ ಹೊತ್ತಿನಲ್ಲಿ ನವದಂಪತಿ ನಡುವೆ ಹೊಡೆದಾಟ ; ವಧು ಸಾವು, ವರನ ಸ್ಥಿತಿ ಗಂಭೀರ

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಮಧ್ಯೆ ಜಗಳವಾಗಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡ ನಂತರ ತೀವ್ರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಜಿಲ್ಲೆಯ ಕೆಜಿಎಫ್ (KGF)​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವರ ನವೀನ್ ಬುಧವಾರ (ಆಗಸ್ಟ್​​ 7) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮದುವೆ ಕಾರ್ಯಕ್ರಮ ಮುಗಿದ ಬಳಿಕ ಮುಗಿದ ಬಳಿಕ ರೂಮಿಗೆ ಹೋದ ವಧು ಲಿಖಿತ ಶ್ರೀ ಹಾಗೂ ವರ ನವೀನ್ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಆಗಿದ್ದೇನು..?
ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿ ಗ್ರಾಮದ ನವೀನ್, ಆಂಧ್ರಪ್ರದೇಶದ ಬೈನಪಲ್ಲಿ ಗ್ರಾಮದ ಲಿಖಿತಶ್ರೀ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಇಬ್ಬರೂ ಮನೆಯವರನ್ನು ಒಪ್ಪಿಸಿ ಬುಧವಾರ ವಿವಾಹವಾಗಿದ್ದಾರೆ. ಬುಧವಾರ ಬೆಳಿಗ್ಗೆ ಮದುವೆಯ ಎಲ್ಲ ಕಾರ್ಯಕ್ರಮಗಳನ್ನೂ ಇಬ್ಬರೂ ಜೊತೆಯಾಗಿ ಸಂತೋಷದಿಂದ ನಿರ್ವಹಿಸಿದ್ದಾರೆ. ಜೊತೆಯಾಗಿ ಸಪ್ತಪದಿ ತುಳಿದಿದ್ದಾರೆ, ತಾಳಿ ಕಟ್ಟಿದ್ದಾರೆ. ಅರುಂಧತಿ ನಕ್ಷತ್ರ ನೋಡಿದ್ದಾರೆ. ವಧು ಲಿಖಿತ ಹಾಗೂ ವರ ನವೀನ್‌ ಅವರ ವಿವಾಹ ಅದ್ಧೂರಿಯಾಗಿ ನಡೆಯಿತು. ಆದರೆ ಇದಾದ ಬಳಿಕ ರೂಮಿಗೆ ಹೋದ ನವ ದಂಪತಿಗೆ ಏನಾಯ್ತೋ ಗೊತ್ತಿಲ್ಲ. ಇವರ ಜಗಳ ಆರಂಭವಾಗಿದೆ.

ಜಗಳ ವಿಕೋಪಕ್ಕೆ ಹೊಡೆದಾಟಕ್ಕೆ ತಿರುಗಿದೆ. ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇಬ್ಬರೂ ಚಾಕುವಿನಿಂದ ಹೊಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಹೊಡೆದಾಟದಲ್ಲಿ ವಧು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ತಕ್ಷಣವೇ ಕೆಜಿಎಫ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಧು ಲಿಖಿತ ಮೃತಪಟ್ಟಿದ್ದಾರೆ, ವರನೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಡೆದಾಟದ ವೇಳೆ ಕೋಪದಲ್ಲಿ ವಧುವಿಗೆ ವರ ಚಾಕುವಿನಿಂದ ತಿವಿದಿದ್ದಾನೆ, ನಂತರ ಆಕೆ ಗಂಭೀರವಾಗಿ ಗಾಯಗೊಂಡ ನಂತರ ತನಗೆತಾನೇ ತಿವಿದುಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಪ್ರೀತಿಸಿ ವಿವಾಹವಾದ ನಂತರ ಸುಖವಾಗಿ ಸಂಸಾರ ನಡೆಸಬೇಕು ಎನ್ನುವಾಗಲೇ ಈ ದುರಂತ ಸಂಭವಿಸಿದೆ. ಇವರು ಯಾವ ಕಾರಣಕ್ಕೆ ಹೊಡೆದಾಡಿಕೊಂಡರು ಎಂಬುದು ಸ್ಪಷ್ಟವಾಗಬೇಕಿದೆ. ಈ ಕುರಿತು ಸ್ಥತನಿಖೆ ನಡೆಸಬೇಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ