Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯ ಬಿಜೆಪಿ ಮಾಧ್ಯಮ ಸದಸ್ಯರಾಗಿ ನೇಮಕಗೊಂಡ ಸಿದ್ದನಗೌಡರ

 

ಬೆಳಗಾವಿ :
ಕಳೆದ 2 ದಶಕಗಳಿಂದ
ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಾ ಅನೇಕ ಹುದ್ದೆಗಳನ್ನು ನಿಭಾಯಿಸಿದ್ದ ಎಫ್‌ಎಸ್.ಸಿದ್ದನಗೌಡರ ಇಂದು ರಾಜ್ಯ ಬಿಜೆಪಿ ಮಾಧ್ಯಮ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಕಳೆದ 4 ವರ್ಷಗಳಿಂದ ಜಿಲ್ಲಾ ಮಾಧ್ಯಮ ಸಂಚಾಲಕರಾಗಿ ರಾಜ್ಯದಲ್ಲಿಯೆ ಅತ್ಯುತ್ತಮವಾಗಿ ಜವಾಬ್ದಾರಿ ನಿಭಾಯಿಸಿದ್ದ ಇವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ತಂಡದಲ್ಲಿ‌ ಉತ್ತರ ಕರ್ನಾಟಕದ 54 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆಯುದ್ದಕ್ಕೂ ಸಂಚರಿಸಿ ರಾಜ್ಯ ಬಿಜೆಪಿ ಮಾಧ್ಯಮ ಕ್ಷೇತ್ರದಲ್ಲಿ ಯಶಸ್ವಿಯಾಗಿದ್ದರು. ಜಿಲ್ಲೆಯಲ್ಲಿ ಬಿಜೆಪಿಯ ಪ್ರತಿಯೊಂದು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಪಕ್ಷದಲ್ಲಿ ಮಾಡಿದ ಸೇವಾಕಾರ್ಯಗಳನ್ನು ರಾಜ್ಯ ಬಿಜೆಪಿ ಪರಿಗಣಿಸಿ ಜಿಲ್ಲೆಯ ಪದಾಧಿಕಾರಿಯಾಗುವ ಇವರ ಕನಸನ್ನು ರಾಜ್ಯ ಪದಾಧಿಕಾರಿಯಾಗಿ ಮಾಡುವಂತೆ ಮಾಡಿದೆ. ಇವರ ಆಯ್ಕೆಗೆ ಜಿಲ್ಲೆ ಮತ್ತು ರಾಜ್ಯದಿಂದ ಪಕ್ಷದ ಕಾರ್ಯಕರ್ತರು ಅಭಿನಂದನೆಗಳ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ‌ ಮಾತನಾಡಿ, ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ‌ ಸದಸ್ಯ ಸ್ಥಾನ ಬೆಳಗಾವಿ ಜಿಲ್ಲೆಗೆ ಪ್ರಥಮವಾಗಿ ಒಲಿದು ಬಂದಿದ್ದು ಈ ಗುರುತರ ಜವಾಬ್ದಾರಿಯಲ್ಲಿ ಎಫ್.ಎಸ್.ಸಿದ್ದನಗೌಡರ ಯಶಸ್ವಿಯಾಗಲೆಂದರು. ನಿಕಟ ಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಮುರಘೇಂದ್ರಗೌಡ ಪಾಟೀಲ‌ ಮಾತನಾಡಿ, ರಾಜ್ಯ ಬಿಜೆಪಿ ಘಟಕ ಜಿಲ್ಲೆಗೆ ಹೆಚ್ಚಿನ ರಾಜ್ಯ ಪದಾಧಿಕಾರಿಗಳ ಸ್ಥಾನಮಾನ ನೀಡಿದ್ದು ಬರುವ ಲೊಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕ‌ ಮತಗಳ ಅಂತರದಿಂದ ಗೆಲವು ಸಾಧಿಸಲು ಕಾರ್ಯಕರ್ತರ ಸಹಕಾರದೊಂದಿಗೆ ಪದಾಧಿಕಾರಿಗಳು ಹೆಚ್ಚಿನ ಶ್ರಮವಹಿಸೋಣ ಎಂದರು.

ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ
ಸತ್ಕಾರ ಸ್ವೀಕರಿಸಿ ಮಾತನಾಡಿ, ಬಿಜೆಪಿಯಲ್ಲಿ ಶ್ರಮವಹಿಸಿ ಕೆಲಸ ಮಾಡುವ ಕಾರ್ಯಕರ್ತರನ್ನು ಗುರುತಿಸಿ ಪಕ್ಷದ ಹಿರಿಯರು ರಾಜ್ಯಮಟ್ಟದ ಜವಾಬ್ದಾರಿ ನೀಡಿದ್ದು ಪಕ್ಷ ಸಂಘಟನೆಗಾಗಿ ಹಗಲಿರಳು ಶ್ರಮಿಸುವುದಾಗಿ ಹೇಳಿದರು.
ಸಾಮಾಜಿಕ ಜಾಲತಾಣದ ರಾಜ್ಯ ಪದಾಧಿಕಾರಿಯಾಗಿ ಆಯ್ಕೆಯಾದ ನಿತಿನ‌ ಚೌಗಲೆಯವರನ್ನು ಸತ್ಕರಿಸಲಾಯಿತು.
ಡಾ.ಕೆ.ವಿ.ಪಾಟೀಲ, ದಾದಾಗೌಡ ಬಿರಾದಾರ, ವಿಜಯ ಗುಡದರಿ, ವಿಠಲ ಸಾಯಣ್ಣವರ, ಮಹಾಂತೇಶ ಚಿನ್ನಪ್ಪಗೌಡರ, ಮಂಜುನಾಥ ಪಮ್ಮಾರ, ವೀರಭದ್ರ ಪೂಜಾರ, ಯಲ್ಲೇಶ ಕೊಲಕಾರ, ಮಹಾಂತೇಶ ಹೊಸಗೌಡ್ರ ಮುಂತಾದವರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ