Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಕೆಣಕಿದ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಹೇಳಿಕೆ ಮೂಲಕ ಮೋದಿ ಅವರನ್ನು ಕೆಣಕಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ ಸಾರಾಂಶ ಇದು :

ಬಿಜೆಪಿ ಪಕ್ಷದ್ದು ಮನೆಯೊಂದು, ನೂರು ಬಾಗಿಲು. ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು ವಿಪರ್ಯಾಸ.

ಪ್ರಧಾನಿ ನರೇಂದ್ರ ಮೋದಿ ಅವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ.

ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ನಲ್ಲಿ ಅಂತರ್‌ಕಲಹ ನಡೆಯುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿ ಉಲ್ಲೇಖಗೊಳ್ಳುತ್ತಲಿರುವ ಪಕ್ಷಗಳ ಹೆಸರಲ್ಲಿ ಗೊಂದಲ ಮಾಡಿಕೊಂಡು, ಬಿಜೆಪಿ ಬದಲಿಗೆ ಕಾಂಗ್ರೆಸ್ ಎಂದು ತಿಳಿದುಕೊಂಡು ಈ ಅಭಿಪ್ರಾಯ ವ್ಯಕ್ತಪಡಿಸಿರಬಹುದು. ಈ ಗೊಂದಲ ನಿವಾರಣೆಗಾಗಿ ಅವರು ತಕ್ಷಣ ಸ್ಪಷ್ಟೀಕರಣ ನೀಡಬೇಕೆಂದು ಮನವಿ ಮಾಡುತ್ತೇನೆ.

ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ - ಪ್ರತ್ಯಾರೋಪ, ಪರಸ್ಪರ ದೂಷಣೆ - ನಿಂದನೆಯ ಧಾರವಾಹಿ ಮೂಲಕ ಜನರನ್ನು ರಂಜಿಸುತ್ತಿದ್ದಾರೆ.

ಸನ್ಮಾನ್ಯ ನರೇಂದ್ರ ಮೋದಿ ಅವರೇ, ದಯವಿಟ್ಟು ತಾವು ಬೆಳಿಗ್ಗೆ ಎದ್ದು ಕರ್ನಾಟಕದಿಂದ ಪ್ರಕಟವಾಗುವ ಪತ್ರಿಕೆಗಳ ಮೇಲೆ ಕಣ್ಣಾಡಿಸಿದರೆ ನಿಮ್ಮ ಪಕ್ಷದಲ್ಲಿ ನಡೆಯುವ ಅಂತರ್‌ಕಲಹದ ಒಂದು ಅಂದಾಜು ಸಿಗಬಹುದು. ಇದರ ನಂತರವಾದರೂ ನೀವು ನಮ್ಮ ಪಕ್ಷದ ಕಡೆ ಬೊಟ್ಟು ಮಾಡುವುದನ್ನು ನಿಲ್ಲಿಸಿ, ನಿಮ್ಮ ಪಕ್ಷದ ಅಂತರ್‌ಕಲಹದ ಬೆಂಕಿಯನ್ನು ಶಮನ ಮಾಡಲು ಪ್ರಯತ್ನ ನಡೆಸಬಹುದು.

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬೆಳಿಗ್ಗೆ ಎದ್ದ ಕೂಡಲೇ ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಸಾವಿರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಇವರ ಆರೋಪಗಳಿಗೆ ಶಾಸಕರಾದ ರಮೇಶ್ ಜಾರಕಿಹೊಳಿ, ಸಿ.ಟಿ.ರವಿ ಮೊದಲಾದವರು ದನಿಗೂಡಿಸಿ ಅಪ್ಪ-ಮಕ್ಕಳ ವಿರುದ್ದ ಬಗೆಬಗೆಯ ಆರೋಪಗಳನ್ನು ಮಾಡಿದ್ದಾರೆ. ಇದೀಗ ಉಚ್ಚಾಟಿತ ಬಿಜೆಪಿ ನಾಯಕ ಈಶ್ವರಪ್ಪನವರ ಮನೆಯಲ್ಲಿಯೇ ಕೂತು ಭಿನ್ನಮತೀಯ ಶಾಸಕರು ಸಭೆ ನಡೆಸಿದ್ದಾರೆ. ಇದನ್ನು ಅಂತರ್‌ಕಲಹ ಎಂದು ಕರೆಯದೆ ಪ್ರೇಮಸಲ್ಲಾಪ ಎನ್ನೋಣವೇ?

ಕರ್ನಾಟಕದ ಬಿಜೆಪಿಯಲ್ಲಿನ ಅಂತರ್‌ಕಲಹ ಇತ್ತೀಚಿನ ಬೆಳವಣಿಗೆಯೇನಲ್ಲ, ಇದಕ್ಕೊಂದು ಇತಿಹಾಸವಿದೆ...
ಕರ್ನಾಟಕದ ಜನತೆ ಎಂದೂ ಬಿಜೆಪಿಗೆ ಪೂರ್ಣಬಹುಮತ ನೀಡಿ ಅಧಿಕಾರಕ್ಕೆ ತಂದಿಲ್ಲ. ಅಕ್ರಮ ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರೂ ಯಾರೇ ಒಬ್ಬ ಮುಖ್ಯಮಂತ್ರಿ ಪೂರ್ಣಾವಧಿ ಆಳಿಲ್ಲ. 2008 ರಿಂದ 2013ರ ವರೆಗೆ ಮೂವರು ಮುಖ್ಯಮಂತ್ರಿಗಳು, 2019ರಿಂದ 2023ರ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳು. ಕರ್ನಾಟಕದ ಬಿಜೆಪಿಯೊಳಗಿನ ಅಂತರ್‌ಕಲಹ ನಮ್ಮಲ್ಲಿ ಮನೆಮನೆಮಾತಾಗಿದೆ. ಇದರಲ್ಲಿ ನಮ್ಮ ಪಕ್ಷದ ಯಾವುದೇ ಪಾತ್ರ ಇಲ್ಲ. ಇವೆಲ್ಲ ಸ್ವಯಂಕೃತ ಅಪರಾಧದ ಹಳವಂಡಗಳು.

2011ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಪಕ್ಷದೊಳಗಿನ ಅಂತರ್‌ಕಲಹವೂ ಕಾರಣ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಮರೆತುಬಿಟ್ಟಿದ್ದಾರೆ. ಅದರ ನಂತರ ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿದ್ದ ಯಡಿಯೂರಪ್ಪನವರು ವಾಜಪೇಯಿ - ಅಡ್ವಾಣಿಯವರನ್ನು ಸೇರಿದಂತೆ ಯಾರನ್ನೂ ಬಿಡದೆ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸಿದ್ದಾರೆ. ಕೊನೆಗೆ ಅವರನ್ನೇ ಕರೆತಂದು ಮುಖ್ಯಮಂತ್ರಿ ಮಾಡಿದ್ದಾಯಿತು, ನಂತರ ಅವರನ್ನು ಪದಚ್ಯುತಿಗೊಳಿಸಿಯೂ ಆಯಿತು. ಇವೆಲ್ಲದರ ಹಿಂದೆ ಪಕ್ಷದ ಅಂತರ್‌ಕಲಹ ಕಾರಣ ಅಲ್ಲವೇ?

ಪ್ರಧಾನಿ ನರೇಂದ್ರ ಮೋದಿ ಅವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ. ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಚಿಂತೆ ಮಾಡಬೇಡಿ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲ ಪೂರ್ಣಾವಧಿಯನ್ನು ಮುಗಿಸಿದ್ದೇವೆ. ದೇವರಾಜ ಅರಸು ನಂತರ ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ನಾನು ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಮ್ಮೊಳಗೆ ಜಗಳ ಹುಟ್ಟುಹಾಕುವ ನಿಮ್ಮೆಲ್ಲರ ನಿರಂತರ ಪ್ರಯತ್ನದ ಹೊರತಾಗಿಯೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ.

************************



 

*ವಿಜ್ಞಾನಿಗಳ ಸಾಧನೆ ಯುವ ಪೀಳಿಗೆಗೆ ಆದರ್ಶ: ಸಿಎಂ*

*ವಿಜ್ಞಾನ-ತಂತ್ರಜ್ಞಾನದಲ್ಲಿ ಯುವ ಪೀಳಿಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಲು ಅನುಕೂಲ: ಸಾಧಕರಿಗೆ ಮೆಚ್ಚುಗೆ ಸೂಚಿಸಿದ ಸಿಎಂ*

*ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ: ಸಿ.ಎಂ*

ಬೆಂಗಳೂರು ಸೆ 26: ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಭಾರತೀಯ ವಿಜ್ಞಾನ ಮಂದಿರ ಸಂಸ್ಥೆಯ (IISC) ಜೆ.ಎನ್.ಟಾಟಾ ಸಭಾಂಗಣದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮದಲ್ಲಿ 2022 ಮತ್ತು 2023 ನೇ ಸಾಲಿನ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಪ್ರಶಸ್ತಿ ಪುರಸ್ಕೃತ ವಿಜ್ಞಾನಿಗಳ ಸಾಧನೆ ಯುವ ಪೀಳಿಗೆಗೆ ಆದರ್ಶ. ಇವರ ಸಾಧನೆ ವಿಜ್ಞಾನ-ತಂತ್ರಜ್ಞಾನದಲ್ಲಿ ಯುವ ಪೀಳಿಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಲು ಅನುಕೂಲ ಆಗುತ್ತದೆ ಎಂದು ಶ್ಲಾಘಿಸಿದರು.

ಸಿ.ಎನ್.ರಾವ್ ಅವರ ಸಾಧನೆ ಇಡಿ ಮನುಷ್ಯ ಕುಲದ ಹೆಮ್ಮೆ. ವಿಜ್ಞಾನದ ಬೆಳವಣಿಗೆಗೆ ಇವರ ತುಡಿತ ಶ್ಲಾಘನೀಯ. ಕರ್ನಾಟಕ ರಾಜ್ಯ ವಿಜ್ಞಾನ-ತಂತ್ರಜ್ಞಾನ ಮತ್ತು ಸಂಶೋಧನೆಯಲ್ಲಿ ನಂಬರ್ ಒನ್ ಇದ್ದೇವೆ. ಈ ವಿಜ್ಞಾನ ತಂತ್ರಜ್ಞಾನದ ಫಲ ಜನ ಸಾಮಾನ್ಯರಿಗೆ ತಲುಪಬೇಕು ಎಂದು ಆಶಿಸಿದರು.

ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಆಗಿದೆ ಎಂದರೆ ಇದರಲ್ಲಿ ಹಲವು ವಿಜ್ಞಾನಿಗಳ, ತಂತ್ರಜ್ಞರ ಕೊಡುಗೆ ಇದೆ ಎಂದರು.

ವಿಜ್ಞಾನದ ಆಸಕ್ತಿ ಹೆಚ್ಚಿ, ವಿಜ್ಞಾನಿಗಳ ಸಂಖ್ಯೆ ಹೆಚ್ಚಾದರೆ ದೇಶದ ಬೆಳವಣಿಗೆ ಸಾಧ್ಯ. ಸಮಾಜದ ತಾರತಮ್ಯ ಅಳಿಯಬೇಕಾದರೆ ಎಲ್ಲಾ ಜಾತಿ, ಧರ್ಮ, ವರ್ಗಗಳಿಗೆ ಸಮಾನ ಅವಕಾಶಗಳು‌ ಸಿಗುವಂತಾಗಬೇಕು ಎಂದರು.

ಗ್ರಾಮೀಣ ಭಾಗದ ಹಲವರು ವಿಜ್ಞಾನಿಗಳಾಗಿ ಪ್ರಶಸ್ತಿ ಪುರಸ್ಕೃತರಾಗಿರುವುದು ಖುಷಿಯ ವಿಚಾರ.

ಪ್ರತಿಭೆ ಅನುವಂಶೀಯ ಅಲ್ಲ. ಅವಕಾಶ ಮತ್ತು ನಿರಂತರ ಶ್ರಮದಿಂದ ಪ್ರತಿಭೆ ವಿಸ್ತಾರಗೊಳ್ಳುತ್ತದೆ ಎಂದರು.

ಭಾರತ ರತ್ನ ಪ್ರೊ.ಸಿ.ಎನ್.ಆರ್.ರಾವ್ , ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್.ಎಸ್.ಬೋಸರಾಜು ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

*ಬಾಕ್ಸ್*

ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಬಹಳಷ್ಟು ಆದ್ಯತೆ ನೀಡಿದ್ದಾರೆ. ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ ಅಭಿವೃದ್ಧಿ ಗೆ ಪೂರಕವಾಗುವ ಹಾಗೂ ರೈತ ಸಮುದಾಯಕ್ಕೆ ನೆರವಾಗುವಂತಹ ತಂತ್ರಜ್ಞಾನ ಆಧಾರಿತ ಯೋಜನೆಗಳನ್ನು ರೂಪಿಸುವತ್ತ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಮುಂದಾಗಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಹೇಳಿದರು.

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ