Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ಬಜೆಟ್ 2025 | ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಭರಪೂರ ಕೊಡುಗೆ

 

ಬೆಂಗಳೂರು: ಕರ್ನಾಟಕದ ೨೦೨೫ರ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಮುಸ್ಲಿಮರಿಗೆ ಹಾಗೂ ರಾಜ್ಯದ ಇನ್ನುಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾದವೆಂದರೆ, 2 ಕೋಟಿ ರೂ.ವರೆಗಿನ ಗುತ್ತಿಗೆ ಕಾಮಗಾರಿಗಳಲ್ಲಿ ಪ್ರವರ್ಗ 2, 2ಎ ವರ್ಗದವರಿಗೆ (ಅಲ್ಪಸಂಖ್ಯಾತರು) ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ.
ವಕ್ಫ್ ಆಸ್ತಿಗಳ ರಕ್ಷಣೆಗಾಗಿ 150 ಕೋಟಿ ರೂ.ಗಳನ್ನು ಮೀಸಲಿರಿಸುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಅದಲ್ಲದೆ, ಹಜ್ ಭವನದಲ್ಲಿ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕೇಂದ್ರ ಸ್ಥಾಪನೆ, ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಯುವತಿಯರ ಮದುವೆಗೆ ತಲಾ 50,000 ಘೋಷಣೆ, ಅಲ್ಪಸಂಖ್ಯಾತ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ., ವಕ್ಫ್ ಮಾಲೀಕತ್ವದ ಖಾಲಿ ಸ್ಥಳಗಳಲ್ಲಿ ಒಟ್ಟು 16 ಮಹಿಳಾ ಕಾಲೇಜುಗಳ ನಿರ್ಮಾಣ ಹೀಗೆ ವಿವಿಧ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಮುಸ್ಲಿಮರಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು..?
ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ. ಮೀಸಲು.
ಅಲ್ಪಸಂಖ್ಯಾತ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ.
100 ಉರ್ದು ಶಾಲೆಗಳ ಉನ್ನತೀಕರಣಕ್ಕೆ 100 ಕೋಟಿ ರೂ.
ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕೇಂದ್ರ ಸ್ಥಾಪನೆ.
ವಕ್ಫ್ ಖಾಲಿ ನಿವೇಶನಗಳಲ್ಲಿ 16 ಮಹಿಳಾ ಕಾಲೇಜು ನಿರ್ಮಾಣ.
ಬೆಂಗಳೂರು ಹಜ್ ಯಾತ್ರಿಕರಿಗೆ ಹೆಚ್ಚುವರಿ ಕಟ್ಟಡ.
2,500 ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ಕಲೆ ಕಲಿಯಲು ಸೌಲಭ್ಯ.
ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ ನಗದು ಪ್ರೋತ್ಸಾಹ ಧನ; ಪ್ರತಿ ಜೋಡಿಗೆ 50 ಸಾವಿರ ರೂ.
ಮದರಸಾಗಳಲ್ಲಿ ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಸೌಲಭ್ಯ.
ಅಲ್ಪಸಂಖ್ಯಾತ ಯುವಕ ಯುವತಿಯರ ನವೋದ್ಯಮಕ್ಕೆ ಉತ್ತೇಜನ
ಇತರೆ ಅಲ್ಪಸಂಖ್ಯಾತರಿಗೆ….
ಜೈನ, ಬುದ್ಧ, ಸಿಖ್ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.
ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 250 ಕೋಟಿ ರೂ.
ಗುರುದ್ವಾರಗಳಿಗೆ ಮೂಲಸೌಕರ್ಯಗಳಿಗೆ 2 ಕೋಟಿ ರೂ. ಅನುದಾನ.
ಬೌದ್ಧ ಅಧ್ಯಯನ ಅಕಾಡೆಮಿ, ಮಹಾಬೋಧಿ ಅಧ್ಯಯನ ಕೇಂದ್ರ ಸ್ಥಾಪನೆಗೆ ನಿರ್ಧಾರ.
ಅಲ್ಪಸಂಖ್ಯಾತ ಮೊರಾಜಿ ಶಾಲೆಗಳಲ್ಲಿ ಕಾಮರ್ಸ್ ವಿಭಾಗ
ಜೈನ ಅರ್ಚಕರು, ಸಿಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್ ಗಳಿಗೆ ನೀಡುತ್ತಿರುವ ಮಾಸಿಕ ಗೌರವಧನ 6,000 ರೂ. ಗಳಿಗೆ ಹೆಚ್ಚಳ. ಸಿಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳಿಗೆ ನೀಡುವ ಮಾಸಿಕ ಗೌರವಧನವನ್ನು 5,000ಕ್ಕೆ ಏರಿಕೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ