Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ನೂತನ ಡಿವೈಎಸ್ ಪಿ ಗಳಿಗೆ ಸಿದ್ದರಾಮಯ್ಯ ಕರೆ

 

ಮೈಸೂರು :
ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 37ನೇ ತಂಡದ ಪ್ರೊಬೆಷನರಿ ಪೊಲೀಸ್ ಉಪಾಧೀಕ್ಷಕರು ಮತ್ತು ಅಬಕಾರಿ ಉಪಾಧೀಕ್ಷಕರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಅಸಮಾನತೆ, ಜಾತಿ ತಾರತಮ್ಯ ಇರುವ ಸಮಾಜದಲ್ಲಿ ಅಶಕ್ತರಿಗೂ ನ್ಯಾಯ ಸಿಗುವಂತಾಗಬೇಕು. ಕೇವಲ ಬಲಾಡ್ಯರಿಗೆ ಮಾತ್ರ ನ್ಯಾಯ ಸಿಗುವಂತಾದರೆ ಇಷ್ಟೆಲ್ಲಾ ತರಬೇತಿ ಪಡೆದು ಪ್ರಯೋಜನ ಆಗುವುದಿಲ್ಲ. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಅತ್ಯಂತ ಕಡಿಮೆ ಇರುವುದನ್ನು ಪ್ರಸ್ತಾಪಿಸಿ ಇದು ಸರಿಯಾಗಬೇಕಿದೆ ಎಂದರು.

ಸುಳ್ಳು ಮತ್ತು ದ್ವೇಷದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಅತ್ಯಂತ ನಿಷ್ಠುರವಾಗಿ ವರ್ತಿಸಿ ಪ್ರತಿಯೊಬ್ಬರ ಸಂವಿಧಾನ ಬದ್ದ ಹಕ್ಕುಗಳನ್ನು ರಕ್ಷಿಸುವ ಸವಾಲು ನಿಮ್ಮ ಮೇಲಿದೆ. ದ್ವೇಷ ಕಾರುವವರಿಗೆ ಎಷ್ಟೇ ರಾಜಕೀಯ ಶಕ್ತಿ ಇದ್ದರೂ ಅವರನ್ನು ಮಟ್ಟ ಹಾಕದಿದ್ದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ.

ಶಾಂತಿ-ಸುವ್ಯವಸ್ಥೆ ಇಲ್ಲದ ಸಮಾಜ, ನಾಡು, ದೇಶ ಅಭಿವೃದ್ಧಿ ಹೊಂದಲು, ಪ್ರಗತಿ ಪಥದಲ್ಲಿ ಮುಂದೆ ಸಾಗಲು ಸಾಧ್ಯವೇ ಇಲ್ಲ ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.

ಕರ್ನಾಟಕ ಪೊಲೀಸ್ ಅಕಾಡೆಮಿ ತರಬೇತಿಯಲ್ಲಿ ಉನ್ನತ ಪ್ರತಿಷ್ಠೆ ಗಳಿಸಿದೆ. ಇಲ್ಲಿ ಶಿಸ್ತಿನ ಜತೆಗೆ ಸಾಮಾಜಿಕ ಜವಾಬ್ದಾರಿಯನ್ನು ಪ್ರಶಿಕ್ಷಣಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಸಾರ್ವಜನಿಕ ಜೀವನದಲ್ಲಿ ಇರುವವರೆಗೆ ನಾವು ಸಾಮಾಜಿಕ ಜವಾಬ್ದಾರಿಯನ್ನು , ಜನಸ್ನೇಹಿಗಳಾಗಿರುವುದನ್ನು ಮರೆಯಬಾರದು. ಜನರ ಕಷ್ಟಗಳನ್ನು ಆಲಿಸುವ ಮತ್ತು ಪರಿಹಾರ ಹುಡುಕುವ ತಾಳ್ಮೆ ಇಟ್ಟುಕೊಂಡವರು ಮಾತ್ರ ಸಾರ್ವಜನಿಕ‌ ಜೀವನದಲ್ಲಿರುವ ಅರ್ಹತೆ ಪಡೆದುಕೊಳ್ಳುತ್ತಾರೆ ಎಂದರು.

ಜನರು ನಿಮ್ಮ ಮೇಲೆ ಇಟ್ಟ ವಿಶ್ವಾಸವನ್ನು ಜವಾಬ್ದಾರಿಯಿಂದ ನಿರ್ವಹಿಸಿ. ಪೊಲೀಸರು ಅನೇಕ ಸಂದರ್ಭಗಳಲ್ಲಿ ಕ್ಲಿಷ್ಟ ಪರಿಸ್ಥಿತಿಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. ಎಂಥದ್ದೇ ಸಂದರ್ಭದಲ್ಲೂ ತಾಳ್ಮೆ ಕಳೆದುಕೊಳ್ಳದೆ ಕರ್ತವ್ಯ ನಿರ್ವಹಿಸಬೇಕು ಎಂದರು.

ಗೃಹ ಸಚಿವ ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ