Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಸತ್ ಮೇಲೆ ದಾಳಿ : ಖಂಡಿಸಿದ ಸಿದ್ದರಾಮಯ್ಯ

 

 

ಬೆಳಗಾವಿ :
ದೇಶದ ಸಂಸತ್ ಮೇಲೆ ಬುಧವಾರ ನಡೆದ ದಾಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿ ಈ ಬಗ್ಗೆ ಹೇಳಿಕೆ ಹೊರಡಿಸಿದ್ದಾರೆ.

ಪೂರ್ಣ ಸಾರಂಶ :
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವರ ಕರ್ತವ್ಯವಾಗಿದೆ.

ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.

ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ.

ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತಾ ಎಂಬೀತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ