Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಿಎಸ್​ಟಿ ಮಂಡಳಿ ಸಂಚಾಲಕ ಸ್ಥಾನಕ್ಕೆ ಸಿದ್ದರಾಮಯ್ಯ ?

 

ದೆಹಲಿ :
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಎಸ್‌ಟಿ ಸುಧಾರಣಾ ಸಮಿತಿ ಸಂಚಾಲಕರಾಗುವ ಸಾಧ್ಯತೆ ಇದೆ.
ಇದುವರೆಗೆ ಆ ಹುದ್ದೆಯಲ್ಲಿ ಬಸವರಾಜ ಬೊಮ್ಮಾಯಿ ಇದ್ದರು. ಇತ್ತೀಚಿಗೆ ಅವರು ಅಧಿಕಾರದಿಂದ ನಿರ್ಗಮಿಸಿದ್ದಾರೆ. ಆದ್ದರಿಂದ ಆ ಹುದ್ದೆ ತೆರವಾಗಿದೆ. ಅದಕ್ಕೆ ನೇಮಕ ನಡೆಸುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವಾಲಯ ಸಮರ್ಥರ ಶೋಧದಲ್ಲಿ ತೊಡಗಿದೆ. 2021 ರಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಿಸಲಾಗಿದ್ದು ಕರ್ನಾಟಕ ಈ ಸಮಿತಿಯಲ್ಲಿ ಮುಂದುವರಿಯುವುದರಿಂದ ಮತ್ತು ಹಣಕಾಸು ಖಾತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿರುವುದರಿಂದ ಅವರನ್ನೇ ಈ ಸ್ಥಾನಕ್ಕೆ ನೇಮಕ ಮಾಡುವ ಸಾಧ್ಯತೆ ಹೆಚ್ಚಿದೆ.

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಹಣಕಾಸು ಸಚಿವರು ಆಗಿದ್ದರು. ಆದರೆ ಜಿಎಸ್‌ಟಿ ಮಂಡಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಲು ಸಚಿವ ಕೃಷ್ಣ ಬೈರೇಗೌಡ ಅವರನ್ನು ನಿಯೋಜನೆ ಮಾಡಿದ್ದರು. ನಂತರ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನು ಜಿಎಸ್‌ಟಿ ಮಂಡಳಿಗೆ ನಿಯೋಜಿಸಿದ್ದರು. ನಂತರ ಬೊಮ್ಮಾಯಿ ಮುಖ್ಯಮಂತ್ರಿ ಆದ್ದರಿಂದ ತಾವೇ ಅದರ ಸದಸ್ಯರಾದರು. ಆಮೇಲೆ ಜಿ ಎಸ್ ಟಿ ದರ ನಿಗದಿ ಸಮಿತಿಯ ಸಂಚಾಲಕರಾಗಿ ನೇಮಕಗೊಂಡರು. ಈ ಸಲ ಸಹಜವಾಗಿ ಸಿದ್ದರಾಮಯ್ಯ ಸಮಿತಿಯ ಸಂಚಾಲಕರಾಗುವ ಸಾಧ್ಯತೆ ಇದೆ. ಈ ಮೊದಲಿನಂತೆ ಅವರು ಸಚಿವ ಕೃಷ್ಣಭೈರೇಗೌಡ ಅಥವಾ ಬೇರೆ ಯಾವುದೇ ಸಚಿವರನ್ನು ನಿಯೋಜನೆ ಮಾಡಿದರೆ ಅಧ್ಯಕ್ಷ ಸ್ಥಾನ ತಪ್ಪುವ ಸಾಧ್ಯತೆ ಇದೆ. ಆದ್ದರಿಂದ ಸಿದ್ದರಾಮಯ್ಯ ಅವರೇ ಸಂಚಾಲಕರಾಗುವ ಸಾಧ್ಯತೆ ಹೆಚ್ಚಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ