Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗದಗಿನ ಕನ್ನಡ ರಥದ ಮೆರವಣಿಗೆಯಲ್ಲಿ ಸಿದ್ದರಾಮಯ್ಯ

 

ಗದಗ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಕನ್ನಡ ಸಂಭ್ರಮ-50" ರ ಅದ್ಧೂರಿ ಕಾರ್ಯಕ್ರಮಕ್ಕಾಗಿ ಗದಗ ಪ್ರವೇಶಿಸಿ ವೀರನಾರಾಯಣ ದೇವಸ್ಥಾನದಲ್ಲಿ ನಾರಾಯಣನ ದರ್ಶನ ಪಡೆದರು.

ಬಳಿಕ ಕನ್ನಡ ರಥದ ಮೆರವಣಿಗೆಯಲ್ಲಿ ಸಹಸ್ರ ಸಹಸ್ರ "ಅರಿಶಿನ-ಕುಂಕಮ" ಬಣ್ಣದ ಬಾವುಟಗಳು, ಕಲಶಗಳು ಮತ್ತು ಕನ್ನಡ ಶಾಲುಗಳನ್ನು ಹೊದ್ದ ಕನ್ನಡ ಕಾರ್ಯಕರ್ತರ ಜಯಘೋಷಗಳ ನಡುವೆ ಮೆರವಣಿಗೆಯಲ್ಲಿ ತೆರಳಿದರು.

ಗದಗಿನ ಮುಖ್ಯರಸ್ತೆಗಳಲ್ಲಿ ಸಾಗಿದ ಕನ್ನಡ ರಥವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಗಳು, ಕಾರ್ಯಕರ್ತರು ಹೂಮಳೆಗರೆದು ಸ್ವಾಗತಿಸಿದರು.

ಹಾದಿಯುದ್ದಕ್ಕೂ ಮನೆಗಳ ಮುಂದೆ ಕನ್ನಡದ ರಂಗೋಲಿ, ಬಾವುಟಗಳು ಕಣನ ಸೆಳೆಯುತ್ತಿದ್ದರೆ ಮಹಿಳೆಯರು, ಮಕ್ಕಳು ರಥಕ್ಕೆ ಹೂಮಳೆ ಗರೆಯುತ್ತಾ, ರಥದ ಚಕ್ರಗಳಿಗೆ ಹಣ್ಣು ಕಾಯಿ, ಹಾಲಿನ ಅಭಿಷೇಕ ನಡೆಸುತ್ತಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಂಕಾಳ ವೈದ್ಯ ಸೇರಿ ಹಲವು ಮುಖಂಡರು ಮೆರವಣಿಗೆಯಲ್ಲಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ