Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಲಿ ವಿಲಿ ಒದ್ದಾಟ...ಭ್ರಮಾಲೋಕ...! ವಿರೋಧ ಪಕ್ಷ ಯಾವುದೇ ವಿಚಾರ ಎತ್ತಿದರೂ ಉತ್ತರ ಕೊಡಲು ಸಿದ್ಧ : ಸಿದ್ದರಾಮಯ್ಯ

 

ಬೆಳಗಾವಿ :
ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇವತ್ತಿನವರೆಗೆಯೂ ಬರಗಾಲದ ಚರ್ಚೆಯಾಯಿತು. ಇಂದು ಅದಕ್ಕೆ ಉತ್ತರ ನೀಡುತ್ತೇವೆ. ಈಗಾಗಲೇ ಪ್ರಸ್ತಾಪವಾಗಿರುವ ಬಗ್ಗೆ ಉತ್ತರ ನೀಡುತ್ತೇವೆ ಎಂದರು.

*ಬಿಜೆಪಿಯೊಳಗೆ ಸಮನ್ವಯ ಸಾಧ್ಯವೇ ಇಲ್ಲ*
ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. ನಂತರ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು ಗುಂಪುಗಳಿವೆ ಎಂದರು.

*ತಪ್ಪಿತಸ್ಥರ ವಿರುದ್ಧ ಕ್ರಮ*
ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿರುವ ಬಗ್ಗೆ ಮಾತನಾಡಿ ಯಾರು ತಪ್ಪಿತಸ್ಥರೊ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

*ಪಂಚಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ*
ಪಂಚಮಸಾಲಿ ನಾಯಕರ ಮನವಿಗೆ ಸ್ಪಂದಿಸಿಲ್ಲ ಎಂದು ಸ್ವಾಮೀಜಿಗಳು 13 ರಂದು
ವಿಧಾನಸಭೆ ಅಧಿವೇಶನ ಮುಗಿದ ನಂತರ ಅವರೊಂದಿಗೆ ಚರ್ಚೆ ಮಾಡಲಾಗುತ್ತವೆ ಎಂದು ತಿಳಿಸಲಾಗಿದೆ ಎಂದರು. ಬೆಳಗಾವಿಯಲ್ಲಿ ಪಂಚಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ ಎಂದರು.

*ವಿಧಾನಸಭಾಧ್ಯಕ್ಷರಿಗೆ ಸಂಬಂಧಿಸಿದ್ದು*
ಸುವರ್ಣ ಸೌಧದಲ್ಲಿರುವ ಸಾರ್ವರ್ಕರ್ ಫೋಟೋ ತೆಗೆಯುವ ಬಗ್ಗೆ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ವಿಧಾನಸಭಾಧ್ಯಕ್ಷರಿಗೆ ಸಂಬಂಧಿಸಿದ್ದು ಎಂದರು.

*ಬಿಜೆಪಿ ಮತ್ತು ಜೆಡಿಎಸ್ ಭ್ರಮಾಲೋಕದಲ್ಲಿದ್ದಾರೆ*
ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಬಿಜೆಪಿ ಮತ್ತು ಜೆಡಿಎಸ್ ನೀರಿನಿಂದ ತೆಗೆದ ಮೀನಿನಂತೆ ವಿಲಿ ವಿಲಿ ಎಂದು ಒದ್ದಾಡುತ್ತಿದ್ದು, ಭ್ರಮಾಲೋಕದಲ್ಲಿದ್ದಾರೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ