Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ ಎಂದ ಸಿದ್ದರಾಮಯ್ಯ

 

ಬೆಂಗಳೂರು :
ನೆಹರೂ-ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತ್ ಜೋಡೋ ಸಭಾಂಗಣದಲ್ಲಿ ಆಯೋಜಿಸಿದ್ದ 139 ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೋ ನಂತರ ರಾಹುಲ್ ಗಾಂಧಿ ಅವರು ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ನೇತೃತ್ವ ವಹಿಸುತ್ತಾರೆ. ಪ್ರಧಾನಿ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿ. ಬ್ರಿಟಿಷರನ್ನು ಅಹಿಂಸೆ ಮೂಲಕ ಮಣಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಹುತಾತ್ಮರಾದರು. ಲಕ್ಷಾಂತರ ಮಂದಿಯ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯ ಚಳವಳಿ ನಡೆಯಿತು ಎಂದು ವಿವರಿಸಿದರು.

ಬಿಜೆಪಿ, ಜನ ಸಂಘ, RSS ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ RSS ಹುಟ್ಟಿತ್ತು‌. ಆದರೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಡೋಗೀತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು ಎಂದರು.

ಹಿಂದೂ ಬೇರೆ-ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ಸಿಎಂ ವ್ಯಂಗ್ಯವಾಡಿದರು.

ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿ ಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಸತ್ಯದ ತಲೆ ಮೇಲೆ ಹೊಡೆದಂತೆ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು.

ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅರಣ್ಯ ಸಚಿವ ಈಶ್ವರ್ ಖಂಡ್ರೆ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು