Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಂವಿಧಾನ ಬದಲಾವಣೆಯ ಮಾತನಾಡಿರುವ ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು :ಸಿದ್ದರಾಮಯ್ಯ

ಸಂವಿಧಾನ ಬದಲಾವಣೆಯ ಮಾತನಾಡಿರುವ ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು :ಸಿದ್ದರಾಮಯ್ಯ ಹೆಗಡೆಯವರ ಹೇಳಿಕೆ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಬಿಜೆಪಿ ಪಕ್ಷಕ್ಕೆ ಇದ್ದಂತಿದೆ. ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಪಕ್ಷದಿಂದ ವಜಾ ಮಾಡಲಿ - ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು

ಬೆಂಗಳೂರು :
" ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ
ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ ಜನತಾ ಪಕ್ಷದ ಗುಪ್ತ ಅಜೆಂಡಾದ ಭಾಗವೇ ಆಗಿದೆ
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು,
ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಅವರು ಯಾವ ಹಿಂದೂಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಹೆಗಡೆಯವರ ಹೇಳಿಕೆಯನ್ನು ಗಮನಿಸಿದರೆ
ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಹೆಗಡೆ ಮತ್ತು ಅವರ ಪಕ್ಷಕ್ಕೆ ಇದೆ ಎನ್ನುವುದು ಸ್ಪಷ್ಟ.

ಸಂವಿಧಾನದ ವಿರುದ್ಧ ಅನಂತಕುಮಾರ ಹೆಗಡೆಯವರು ಮಾತನಾಡಿರುವುದು ಇದೇ ಮೊದಲ ಬಾರಿ ಅಲ್ಲ. "ಸಂವಿಧಾನವನ್ನು ಬದಲಾಯಿಸಬೇಕು, ಬದಲಾಯಿಸುವುದೇ ನಮ್ಮ ಉದ್ದೇಶ" ಎಂದೆಲ್ಲಾ ಆಗಾಗ ಅವರು ವಿಷಕಾರುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಬಿಜೆಪಿ ವರಿಷ್ಠರು ಅವರಿಗೆ ಕನಿಷ್ಠ ಎಚ್ಚರಿಕೆಯನ್ನೂ ನೀಡದೆ ಪರೋಕ್ಷವಾಗಿ ಅವರನ್ನು ಬೆಂಬಲಿಸುತ್ತಾ ಬಂದಿರುವುದನ್ನು ನೋಡಿದರೆ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲ ಅವರಿಗೆ ಇದೆ ಎನ್ನುವುದು ಸ್ಪಷ್ಟ.

ಹೆಗಡೆ ಅಭಿಪ್ರಾಯವನ್ನು ಮೋದಿಯವರು ಒಪ್ಪದೆ ಇದ್ದರೆ ಅವರನ್ನು ಮೊದಲು ಪಕ್ಷದಿಂದ ಕಿತ್ತುಹಾಕಬೇಕು. ಅವರ ವಿರುದ್ಧ ಕ್ರಮಕೈಗೊಳ್ಳದೆ ಇದ್ದರೆ ಹೆಗಡೆ ಅಭಿಪ್ರಾಯಕ್ಕೆ ಪ್ರಧಾನಿಯವರ ಸಹಮತ ಇದೆ ಎಂದರ್ಥ. ಸಾರ್ವಜನಿಕ ಭಾಷಣಗಳಲ್ಲಿ ಸಂವಿಧಾನದ ಮೇಲೆ ಬದ್ಧತೆಯನ್ನು ಸಾರುವ ಮೋದಿ ಅವರ ಮಾತುಗಳು ಬರೀ ಓಳು ಎಂದು ತಿಳಿದುಕೊಳ್ಳಬೇಕಾಗುತ್ತದೆ.

ಪಕ್ಷದ ವರಿಷ್ಠರ ಬೆಂಬಲ ಇಲ್ಲದೆ ಅನಂತಕುಮಾರ ಹೆಗಡೆಯಂತಹ ಸಂಸದನೊಬ್ಬ ಈ ರೀತಿ ನಿರ್ಭೀತಿಯಿಂದ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಲು ಸಾಧ್ಯ ಇಲ್ಲ. ಸಂವಿಧಾನಕ್ಕೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಅನಂತ್ ಕುಮಾರ್ ಹೆಗಡೆ, ಅದೇ ಸಂವಿಧಾನದ ವಿರುದ್ಧ ಹೇಳಿಕೆ ನೀಡಿರುವುದು ಖಂಡಿತ ಶಿಕ್ಷಾರ್ಹ ಅಪರಾಧ. ಇದನ್ನು ಲೋಕಸಭಾಧ್ಯಕ್ಷರು ಗಮನಕ್ಕೆ ತೆಗೆದುಕೊಂಡು ಹೆಗಡೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು