Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ : ಸಿದ್ದರಾಮಯ್ಯ

 

ಬೆಳಗಾವಿ  : ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಇನ್ನೂ ಕೂಡ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಿಲ್ಲ. ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಈಗಲೂ ಇಂಥ ಸ್ಥಿತಿ ಇದೆ ಎಂದು ಮುಖ್ಯವಾಹಿನಿಗೆ ಬರದೇ ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದಿಸಿದರು.

ಬೆಳಗಾವಿಯ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಇಂದು ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಾತಿ ವ್ಯವಸ್ಥೆಯ ಸಮಾಜದಲ್ಲಿ ವಾಸ್ತವಿಕ ಅಂಶಗಳನ್ನು ಅರ್ಥಮಾಡಿಕೊಂಡು ಅದರಂತೆ ನಡೆಯಬೇಕಾದುದ್ದು ನಮ್ಮ ಕರ್ತವ್ಯ. ಈ ದೃಷ್ಟಿಯಿಂದ ಇಂಥ ಸಂಘಟನೆ, ಸಮಾವೇಶಗಳು ಅತ್ಯಂತ ಅವಶ್ಯಕ. ಅಧಿಕಾರ ವಿಕೇಂದ್ರೀರಣವಾಗಿ, ಗ್ರಾಮ ಸ್ವರಾಜ್ಯವಾಗಬೇಕು ಎಂದು ಗಾಂಧಿಜೀ ಹೇಳಿದ್ದರು .

*ಸಮಾಜದ ಪ್ರಗತಿಗೆ ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯ*

ಕುರುಬ ಸಮಾಜ ಸಂಘಟಿತವಾಗಿ ಉತ್ತಮ ಕೆಲಸ ಮಾಡಿದೆ. ರಾಜಕೀಯ ಶಕ್ತಿ ಬೆಳೆದು ಎಲ್ಲರಿಗೂ ಅಧಿಕಾರದಲ್ಲಿ ಪಾಲು ಸಿಗಬೇಕು. ಯಾವುದೇ ಸಮಾಜದ ಪ್ರಗತಿಗೆ ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯ. ನಿಮ್ಮ ಪರವಾಗಿ ಧ್ವನಿ ಎತ್ತುವವರು ಇಲ್ಲದಿದ್ದಾಗ ಆ ಸಮುದಾಯ ಹಿಂದುಳಿಯುತ್ತದೆ. ಸಂಘಟನೆ ಮಾಡಿ, ರಾಜಕೀಯವಾಗಿ ಬೆಳೆಯುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದರು.

*ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ :*
ಎಲ್ಲ ಜಾತಿಯವರನ್ನೂ ಒಳಗೊಂಡು ಸರ್ಕಾರವನ್ನು ನಡೆಸುವಂತಹ ಶಕ್ತಿ ಕೊಡು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅನೇಕ ರಾಜ್ಯಗಳಲ್ಲಿ ಕುರುಬ ಸಮುದಾಯದವರು ಎಸ್ ಸಿ, ಎಸ್.ಟಿ., ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಲ್ಲಿಯೂ ಇದ್ದಾರೆ. ಗುಲ್ಬರ್ಗ , ಬೀದರ್ , ಯಾದಗಿರಿಯಲ್ಲಿ ಗೊಂಡ, ರಾಜಗೊಂಡ ಕುರುಬ ಸಮುದಾಯದವರು ಎಸ್ ಟಿ ಗೆ ಸೇರಿದರೆ, ಕೊಡಗು ಜಿಲ್ಲೆಯಲ್ಲಿ ಎಲ್ಲ ಕುರುಬರು ಎಸ್ ಟಿ ಗೆ ಸೇರಿದ್ದಾರೆ. ಗುಲ್ಬರ್ಗ , ಬೀದರ್ , ಯಾದಗಿರಿಯಲ್ಲಿ ಕುರುಬರು ಮತ್ತು ಗೊಂಡ ಸಮುದಾಯದವರು ಒಂದೇ ಆಗಿದ್ದು, ಈ ಸಮುದಾಯಗಳನ್ನು ಎಸ್ ಟಿ ಗೆ ಸೇರಿಸಬೇಕು ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಈಗ ಈ ವಿಚಾರವು ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಗೊಲ್ಲರು, ಕುರುಬರು, ಕೋಳಿ ಸಮಾಜವು ಸೇರಿದಂತೆ ವಿವಿಧ ಸಮಾಜಗಳನ್ನು ಎಸ್ ಟಿ ಸಮುದಾಯಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ