Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಅಭಿವೃದ್ಧಿಯಲ್ಲಿ ಎಸ್.ನಿಜಲಿಂಗಪ್ಪನವರ ಕೊಡುಗೆ ಅಪಾರ : ಸಿದ್ದರಾಮಯ್ಯ

 

ಬೆಂಗಳೂರು :
ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಸ್. ನಿಜಲಿಂಗಪ್ಪನವರು ರಾಜ್ಯ ಕರ್ನಾಟಕವೆಂದು ನಾಮಕರಣವಾದ ನಂತರದ ಮೊದಲ ಮುಖ್ಯಮಂತ್ರಿ. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು ಮಹಾತ್ಮಾ ಗಾಂಧಿ ಹಾಗೂ ವಿನೋಬಾ ಭಾವೆಯವರ ಆದರ್ಶಗಳಿಂದ ಪ್ರೇರಿತರಾಗಿದ್ದರು. ನಿಜಲಿಂಗಪ್ಪನವರು ಕರ್ನಾಟಕದ ಏಕೀಕರಣದಲ್ಲಿ ಭಾಗಿಯಾಗಿದ್ದರು. ಅವರ ಅವಧಿಯಲ್ಲಿ ರೈತರ ಒಳಿತಿಗಾಗಿ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದರು. ಅವಿಭಜಿತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

*ಕಾಂಗ್ರೆಸ್ ನವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ :*

ಜಾರ್ಖಂಡ್ ಸಂಸದರ ಮನೆಯಲ್ಲಿ ಐಟಿ ದಾಳಿಯಾಗಿ ಹಣ ದೊರೆತಿದ್ದು, ಅಲ್ಪಸಂಖ್ಯಾತರಿಗೆ ಆರ್ಥಿಕ ಸೌಲಭ್ಯವಿಲ್ಲವೆನ್ನುವ ಕಾಂಗ್ರೆಸ್ ನವರ ಮನೆಯಲ್ಲಿಯೇ ಅಪಾರ ಹಣ ದೊರೆಯುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನುರೀತ್ಯ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇ ಬೇಕು. ಆದರೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿ ಪಕ್ಷದವರ ಮೇಲೆ ಐಟಿದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ