ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಬಹುದು ಎಂದು ಹೇಳಿರುವುದನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಸ್ಪರ್ಧಿಸದೇ ಇರಬಹುದು ಎಂದು ಹೇಳಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತಾರೆ. ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಅದನ್ನೇ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಅವರು ಖಂಡಿತವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.