ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಕರ್ನಾಟಕ ರಾಜ್ಯ ಕಂಡ ಧೀಮಂತ ರಾಜಕೀಯ ನಾಯಕ, ಕರ್ನಾಟಕ ರಾಜ್ಯದ ತುಂಬಾ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಜನಪ್ರಿಯ ರಾಜಕಾರಣಿ, ಪಕ್ಷ ಸಂಘಟನಾ ಚತುರ, ರೈತರು, ಬಡವರು, ನೋಂದವರ ಪರ ಬೆನ್ನೆಲುಬಾಗಿ ನಿಂತು ಅವರ ಅಭಿವೃದ್ದಿಗಾಗಿ ಹಗಲಿರುಳು ದುಡಿಯುವ ಜನನಾಯಕ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಗಾಯಕ, ಉಪನ್ಯಾಸಕ ಅಶೋಕ ಕೆ. ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಲಕ್ಷ್ಮಣ ಸವದಿ ಅವರಿಗೆ ಎಲ್ಲ ರೀತಿಯಲ್ಲೂ ಜನಬೆಂಬಲ ಇದೆ ಅಥಣಿ ಕ್ಷೇತ್ರದಲ್ಲಿ ಅಭಿವೃದ್ದಿಗೆ ಪೂರಕವಾದ ಹಲವು ಕಾರ್ಯಗಳನ್ನು ಮಾಡಿದ್ದಾರೆ ಹೀಗಾಗಿ ರಾಜ್ಯ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಲ್ಲಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹಿರಿಯ ರಾಜಕಾರಣಿ ಲಕ್ಷ್ಮಣ ಸವದಿ ಅವರು
ವಿವಿಧ ಖಾತೆಗಳ ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ತಮ್ಮ ಅಧಿಕಾರಾವಧಿಯಲ್ಲಿ ಅತ್ಯುತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಸಹಕಾರಿ ಸಚಿವರಾಗಿ ರೈತರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಒಬ್ಬ ಒಳ್ಳೆಯ ರಾಜಕಾರಣಿ ಹಾಗೂ ಅನುಭವಿ ನಾಯಕರಾಗಿದ್ದಾರೆ. ಹಿಂದುಳಿದವರು, ಬಡವರು, ದೀನ ದಲಿತರು, ರೈತರ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ತಮ್ಮದೇ ಆದ ಸಂಘಟನಾತ್ಮಕ ಚತುರತೆ, ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಹಿರಿಯ ನಾಯಕರಾಗಿದ್ದು, ಇವರಿಗೆ ಕಾಂಗ್ರೆಸ್ ಪಕ್ಷವು ಗೌರವ ನೀಡಿ ಸಚಿವ ಸ್ಥಾನ ನೀಡಬೇಕು. ರಾಜ್ಯದಲ್ಲಿಯೇ ಅತಿ ಹೆಚ್ಚು ಮತ ಪಡೆದವರಲ್ಲಿ 2ನೇ ಸ್ಥಾನಕ್ಕಿದ್ದಾರೆ. ಸುಮಾರು 76000 ಮತಗಳ ಅಂತರದಿಂದ ಗೆಲುವು ಮೂಲಕ ಅವರ ಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಇಷ್ಟು ದಿನ ಅವರಿಗೆ ಸಚಿವ ಸ್ಥಾನ ನೀಡಲೇ ಬೇಕೆಂದು ರಾಜ್ಯದ ವಿವಿಧೆಡೆಯಿಂದ ಅವರ ಅಭಿಮಾನಿಗಳು ಪ್ರಭಟನೆ ನಡೆಸುತ್ತಿದ್ದರು. ಅವರ ಪರವಾಗಿ ಎಲ್ಲೆಡೆ ಈಗ ಡಿಕೆ ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಇನ್ನೂ 20 ಜನ ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿದೆ. ಶಾಸಕ ಲಕ್ಷ್ಮಣ ಸವದಿ ಅವರಿಗೆ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯರು ನೀಡಿದ ಭರವಸೆಯಂತೆ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.