ಬೆಳಗಾವಿ: ಹಂದಿಗುಂದ ಸಮೀಪದ ಕಪ್ಪಲಗುದ್ದಿ ಕ್ರಾಸ್ ನಲ್ಲಿ ಮುಧೋಳ-ನಿಪ್ಪಾಣಿ ಹೆದ್ದಾರಿ ಬಳಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಪಟ್ಟಿಯಾದ ಪರಿಣಾಮ ಚಾಲಕ ಮತ್ತು ನಿರ್ವಾಹಕ ಸೇರಿ ಆರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಬಸ್ಸಿನಲ್ಲಿ 65 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಎದುರಿನಿಂದ ವೇಗವಾಗಿ ಬಂದ ಲಾರಿಯನ್ನು ತಪ್ಪಿಸಲು ಹೋದಾಗ ಬಸ್ ರಸ್ತೆ ಬದಿ ಪಲ್ಟಿಯಾಗಿದೆ. ಗಾಯಾಳುಗಳು ಮೂಡಲಗಿ, ಮಹಾಲಿಂಗಪುರ, ಗೋಕಾಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾರೂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.