Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿ

ನವದೆಹಲಿ: ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಶೀಘ್ರ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

'ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಲು ತ್ವರಿತ ನ್ಯಾಯಾಲಯ ಸ್ಥಾಪಿಸಲು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ' ಎಂದು ತಿಳಿಸಿದ್ದಾರೆ.

'ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ನಾವು ಕೈಗೊಳ್ಳುತ್ತಿರುವ ಸರಣಿ ಕ್ರಮಗಳಲ್ಲಿ ಇದೂ ಒಂದಾಗಿದೆ' ಎಂದು ಉಲ್ಲೇಖಿಸಿದ್ದಾರೆ.

'ನಮ್ಮ ಯುವಜನರ ಕ್ಷೇಮ ಮತ್ತು ಭವಿಷ್ಯಕ್ಕಿಂತ ಮುಖ್ಯವಾದದ್ದು ಏನೂ ಇಲ್ಲ. ನಮ್ಮ ಯುವಜನರ ಭವಿಷ್ಯ ಹಾನಿ ಮಾಡಲು ಪ್ರಯತ್ನಿಸುವವರನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.


ತ್ವರಿತ ನ್ಯಾಯಾಲಯವಲ್ಲ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಕು: ಮೋದಿಗೆ ಸಿಜೆಪಿ:
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ
ಶೀಘ್ರ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಬಲವಾಗಿ ತಿರಸ್ಕರಿಸಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರನ್ನು ತ್ವರಿತ ವಿಚಾರಣೆಗೆ ಒಳಪಡಿಸಲು ಮತ್ತು ಕಠಿಣ ಶಿಕ್ಷೆಯನ್ನು ಖಚಿತಪಡಿಸಲು ಕೇಂದ್ರ ಸರ್ಕಾರ ತ್ವರಿತ ನ್ಯಾಯಾಲಯ ಸ್ಥಾಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಕ್ಷಣಗಳಲ್ಲೇ ಸಿಜೆಪಿಯಿಂದ ಈ ಪ್ರತಿಕ್ರಿಯೆ ಬಂದಿದೆ.

'ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು' ಎಂದು ಸಿಜೆಪಿ ತನ್ನ 'ಎಕ್ಸ್' ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!