Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಈ ವರ್ಷದ ಭಗವದ್ಗೀತೆ ಅಭಿಯಾನದ ಕೇಂದ್ರಸ್ಥಾನ ಬೆಳಗಾವಿ - ಸ್ವರ್ಣವಲ್ಲಿ ಶ್ರೀ

 

ಬೆಳಗಾವಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ವತಿಯಿಂದ ಪ್ರತಿ ವರ್ಷ ನಡೆಸಲಾಗುವ ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನವನ್ನು ಈ ವರ್ಷ ಬೆಳಗಾವಿಯನ್ನು ಕೇಂದ್ರಸ್ಥಾನವಾಗಿಸಿಕೊಂಡು ನಡೆಸಲಾಗುವುದು ಎಂದು ಸ್ವರ್ಣವಲ್ಲಿ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ತಿಳಿಸಿದ್ದಾರೆ.
ಮಂಗಳವಾರ ಸಂಜೆ ಬೆಳಗಾವಿಯಲ್ಲಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿ ಈ ವಿಷಯವನ್ನು ಅವರು ಪ್ರಕಟಿಸಿದರು. ನವೆಂಬರ್ 21ರಿಂದ ಡಿಸೆಂಬರ್ 22ರವರೆಗೆ ಭಗವದ್ಘೀತೆ ಅಭಿಯಾನ ನಡೆಯಲಿದೆ. ಡಿ.23ರಂದು ಮಹಾ ಸಮರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದರು.
ಕಳೆದ ಹಲವು ವರ್ಷಗಳಿಂದ ಸ್ವರ್ಣವಲ್ಲಿ ಮಠದಿಂದ ಭಗವದ್ಗೀತೆ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ. ವಿಶೇಷವಾಗಿ ಶಾಲಾ ಮಕ್ಕಳಲ್ಲಿ ಮತ್ತು ಯುವಜನರಲ್ಲಿ ಬದಲಾವಣೆ ತರುವ ಉದ್ದೇಶದಿಂದ ಈ ಅಭಿಯಾನ ನಡೆಸಲಾಗುತ್ತಿದೆ. ಇದರ ಪರಿಣಾಮವಾಗಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಕೈದಿಗಳೂ ಕ್ಷಮಾಪಣೆಯ ಮಟ್ಟಕ್ಕೆ ಬದಲಾಗಿರುವುದನ್ನು ನಾವು ಗಮನಿಸಿದ್ದೇವೆ. ಮನಸ್ಸಿನ ದೌರ್ಭಲ್ಯಗಳನ್ನು ಹೋಗಲಾಡಿಸಿ, ವ್ಯಕ್ತಿತ್ವವನ್ನು ರೂಪಿಸುವ ಕೆಲಸ ಇದರಿಂದ ಆಗುತ್ತಿದೆ. ಭಾರತವನ್ನು ಭಾರತವಾಗಿ ಉಳಿಸಿಕೊಳ್ಳಲು ಈ ಅಭಿಯಾನ ಅಗತ್ಯ ಎಂದು ಸ್ವಾಮಿಗಳು ಹೇಳಿದರು.

ಭಗವದ್ಗೀತೆ ಅಭಿಯಾನದ ಪೂರ್ವಸಿದ್ಧತೆಗೆ ವಿವಿಧ ಸಮಿತಿಗಳನ್ನು ಈ ಸಂದರ್ಭದಲ್ಲಿ ರಚಿಸಲಾಯಿತು.

ರಾಜ್ಯಸಭೆಯ ಮಾಜಿ ಸದಸ್ಯರೂ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರೂ ಆಗಿರುವ ಡಾ.ಪ್ರಭಾಕರ ಕೋರೆ, ಉದ್ಯಮಿ ಗೋಪಾಲ ಜಿನಗೌಡ, ಎಂ.ಬಿ.ಜಿರಲಿ, ಶ್ರೀನಿವಾಸ ಶಿವಣಗಿ, ಎಸ್.ಆರ್.ಹೆಗಡೆ, ಕಾಶಿನಾಥ ಬಿರಾದಾರ, ಮುಕುಲ ಜೋಶಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ