Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಸ್ಎಸ್ಎಲ್‌ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25 ನೇ ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಪ್ರಕಟಿಸಿದ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1ರಿಂದ ಮಾರ್ಚ್ 19 ರ ವರೆಗೆ ಹಾಗೂ ಎಸ್ಎಸ್ಎಲ್‌ಸಿ ಪರೀಕ್ಷೆಗಳನ್ನು ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ನಡೆಸಲು ನಿರ್ಧರಿಸಿದೆ.

 

ಈ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 2 ರಿಂದ 16 ರವರೆಗೆ 15 ದಿನಗಳ ಕಾಲಾವಕಾಶ ನೀಡಿಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಇ-ಮೇಲ್‌ ಮೂಲಕ [email protected] ಗೆ ಸಲ್ಲಿಸಬಹುದು.

ದ್ವೀತಿಯ ಪಿಯುಸಿ ಪರೀಕ್ಷೆ- ತಾತ್ಕಾಲಿಕ ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್.
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ,ಮರಾಠಿ, ಉರ್ದು,ಸಂಸ್ಕೃತ,ಫ್ರೆಂಚ್.
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾರ್ಚ್‌ 8- ಹಿಂದಿ
ಮಾರ್ಚ್ 10- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
ಮಾರ್ಚ್ 12- ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಮೂಲ ಗಣಿತ.
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 15- ಇಂಗ್ಲೀಷ್
ಮಾರ್ಚ್ 17- ಭೂಗೋಳ ಶಾಸ್ತ್ರ, ಜೀವ ಶಾಸ್ತ್ರ
ಮಾರ್ಚ್ 18- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ -1ರ ತಾತ್ಕಾಲಿಕ ವೇಳಾಪಟ್ಟಿ
ಮಾರ್ಚ್‌ 20- ಪ್ರಥಮ ಭಾಷೆ : ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ ( ಎನ್‌ಸಿಇಆರ್‌ಟಿ), ಸಂಸ್ಕೃತ
ಮಾರ್ಚ್‌ 22 -ಸಮಾಜ ವಿಜ್ಞಾನ
ಮಾರ್ಚ್‌ 24 – ದ್ವಿತೀಯ ಭಾಷೆ, ಇಂಗ್ಲಿಷ್, ಕನ್ನಡ
ಮಾರ್ಚ್‌ 27-ಗಣಿತ
ಮಾರ್ಚ್‌ 29 -ತೃತೀಯ ಭಾಷೆ : ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, ಎನ್‌ಎಸ್‌ಕ್ಯೂಎಫ್‌ ವಿಷಯಗಳು.
ಏಪ್ರಿಲ್‌ 2 -ವಿಜ್ಞಾನ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ