Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪ್ರಕಟಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ
ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆ.28ರಿಂದ ಮಾ.17ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2, ಏ.25ರಿಂದ ಮೇ 9ರವರೆಗೆ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್‌ 25 ರಿಂದ ಆರಂಭವಾಗಲಿದ್ದು, ಮೇ 9 ರವರೆಗೆ ನಡೆಯಲಿದೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 1ರ ವರೆಗೆ ನಡೆಯಲಿದೆ. ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2, ಮೇ 18ರಿಂದ 25ರವರೆಗೆ ನಡೆಯಲಿದೆ.

ಪ್ರಕಟಿಸಿರುವ 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್‌ 20 ರಿಂದ ಅಕ್ಟೋಬರ್‌ 9ರ ವರೆಗೆ ಕಾಲಾವಕಾಶವನ್ನು ನೀಡಲಾಗಿದೆ.
ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್ ವಿಳಾಸ [email protected] ಗೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ