Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ ; ಆರೋಪ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂಬ ಆರೋಪಿತ ಪ್ರಕರಣದ ಬಗ್ಗೆ ವರದಿಯಾಗಿದೆ.

ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿ ಪರೀಕ್ಷೆಗೆ ಅವಕಾಶ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. 

ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ ಮುನ್ನೆಲೆಗೆ ಬಂದಿದೆ.

ಗುರುವಾರ ಸಿಇಟಿ ಪರೀಕ್ಷೆ ಆರಂಭದ ದಿನ ನಡೆದ ಪರೀಕ್ಷೆ ವೇಳೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಸಿಬ್ಬಂದಿ ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದಾಗ, ‘ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ’ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊನೆಗೆ ಪೋಷಕರು ಅನಿವಾರ್ಯವಾಗಿ ಜನಿವಾರವನ್ನು ತೆಗೆಸಿ ಮಕ್ಕಳನ್ನು ಪರೀಕ್ಷಾ ಕೊಠಡಿಗೆ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನೆ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಶಿಕ್ಷಣ ಇಲಾಖೆ ಮತ್ತು ಸಿಇಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರ ಮನವೊಲಿಸಲು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು, ಈ ವಿಷಯ ಇನ್ನೂ ಕೆಇಎ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ವರದಿ ಕೇಳಲಾಗುತ್ತದೆ. ಈ ರೀತಿ ನಡೆದಿದ್ದರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಪರೀಕ್ಷಾ ವಸ್ತ್ರಸಂಹಿತೆಯ ಬಗ್ಗೆ ಈಗಾಗಲೇ ವೆಬ್‌ಸೈಟ್ ಮೂಲಕ ಮಾಹಿತಿ ನೀಡಲಾಗಿದೆ. ಕೃಪಾನಿಧಿ ಕಾಲೇಜಿನಲ್ಲಿ ಘಟನೆ ನಡೆದ ಬಗ್ಗೆ ಕೆಇಎ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಸಂಪೂರ್ಣ ವರದಿ ಪಡೆದು ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಳಮೀಸಲಾತಿ: ಸಚಿವ ಸಂಪುಟ ಸಭೆಯ ಐತಿಹಾಸಿಕ ನಿರ್ಧಾರ : ಎಡಗೈ : 5.25%, ಬಲಗೈ: 5.25 % ಹಾಗೂ ಇತರೆ ಸಮುದಾಯಗಳಿಗೆ 4.5% ಮೀಸಲಾತಿ: ಮುಖ್ಯಮಂತ್ರಿ ಸಿದ್ದರಾಮಯ್ಯಎಎಪಿಗೆ ದೊಡ್ಡ ಆಘಾತ : ಬಿಜೆಪಿ ಸೇರುವುದಾಗಿ ರಾಘವ ಚಡ್ಡಾ ಸೇರಿ 7 ಸಂಸದರ ಘೋಷಣೆ…!ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ ; ಆರೋಪಸುಟ್ಟ ಮುಖ, ಕೃತಕ ಕಾಲು, ಬೇಕಿದೆ ಪ್ಲಾಸ್ಟಿಕ್ ಸರ್ಜರಿ..: ಗಂಭೀರ ಸ್ಥಿತಿಯಲ್ಲಿ ಇರಾನ್‌ ಪರಮೋಚ್ಚ ನಾಯಕ: ಆಡಳಿತ ಯಾರ ಕೈಯಲ್ಲಿ..?ಬ್ಯಾಂಕಿಂಗ್ ಭದ್ರತೆಗೆ ‘ಕ್ಲೋಡ್ ಮಿಥೋಸ್’ ಎಐ ಭೀತಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತುರ್ತು ಎಚ್ಚರಿಕೆಕುಡಿಯಲು ಹಣಕ್ಕೆ ಪೀಡಿಸುತ್ತಿದ್ದ ಮಗನನ್ನು ಕೊಂದ ತಾಯಿಬೆಳಗಾವಿ ಪೊಲೀಸರ ಮಹತ್ವದ ಕಾರ್ಯಾಚರಣೆ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ..!ಹಾರ್ಮುಜ್ ಜಲಸಂಧಿಯಲ್ಲಿ ಸ್ಫೋಟಕ ಇರಿಸುವ ಇರಾನ್ ಬೋಟ್‌ ಕಂಡರೆ ಹೊಡೆದುರುಳಿಸಿ: ಅಮೆರಿಕ ನೌಕಾಪಡೆಗೆ ಟ್ರಂಪ್ ಆದೇಶSSLC ಫಲಿತಾಂಶದ ಬೆನ್ನಿಗೆ ಮುಂದಿನ ಪರೀಕ್ಷೆ ದಿನಾಂಕವು ಘೋಷಣೆಬೆಳಗಾವಿ ಬಾಗಿಲಲ್ಲೇ ಇನ್ಮುಂದೆ ವೆಂಕಟೇಶ್ವರನ ದರ್ಶನ ಭಾಗ್ಯ !