Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯ ಸರ್ಕಾರಿ ನೌಕರರ ಸಂಘ ಚುನಾವಣೆ: ಹಾಲಿ ಅಧ್ಯಕ್ಷ ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಅವರು ಪುನರಾಯ್ಕೆಯಾಗಿದ್ದಾರೆ.

ಷಡಾಕ್ಷರಿ ಅವರು 507 ಮತಗಳು ಹಾಗೂ ಬಿ.ಪಿ. ಕೃಷ್ಣಗೌಡ ಅವರು 442 ಮತಗಳನ್ನು ಪಡೆದರು. ಷಡಾಕ್ಷರಿ ಅವರು 65 ಮತಗಳ ಅಂತರದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎ. ಹನುಮನರಸಯ್ಯ ಘೋಷಿಸಿದರು.

ಖಜಾಂಚಿ ಸ್ಥಾನಕ್ಕೆ ಶಿವರುದ್ರಯ್ಯ ವಿ.ವಿ. ಆಯ್ಕೆ:

ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಷಡಾಕ್ಷರಿ ಬಣದ ನಾಗರಾಜ ಆ‌ರ್. ಜುಮ್ಮನ್ನವರ ಅವರು ಸೋಲು ಕಂಡಿದ್ದು, ಕೃಷ್ಣಗೌಡ ಬಣದ ಶಿವರುದ್ರಯ್ಯ ವಿ.ವಿ. 18 ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ಶಿವರುದ್ರಯ್ಯ 485 ಮತಗಳನ್ನು ಪಡೆದರೆ, ನಾಗರಾಜ ಅವರು 467 ಪಡೆದರು.

ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಷಡಾಕ್ಷರಿ ಬಣದ ನಾಗರಾಜ ಆ‌ರ್. ಜುಮ್ಮನ್ನವರ ಅವರು ಸೋಲು ಕಂಡಿದ್ದು, ಕೃಷ್ಣಗೌಡ ಬಣದ ಶಿವರುದ್ರಯ್ಯ ವಿ.ವಿ. 18 ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ಶಿವರುದ್ರಯ್ಯ 485 ಮತಗಳನ್ನು ಪಡೆದರೆ, ನಾಗರಾಜ ಅವರು 467 ಪಡೆದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯಿಂದ ಆರಂಭಗೊಂಡು ರಾಜ್ಯ ಸಂಘದ ಅಧ್ಯಕ್ಷರು, ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆ ಸೆ. 17ರಿಂದ ವಿವಿಧ ಹಂತದಲ್ಲಿ ಆರಂಭವಾಗಿತ್ತು. ಮೊದಲ ಹಂತದಲ್ಲಿ ಮೂರು ಶೈಕ್ಷಣಿಕ ಜಿಲ್ಲೆ ಒಳಗೊಂಡ 33 ಜಿಲ್ಲೆಗಳು ಹಾಗೂ 191 ತಾಲ್ಲೂಕುಗಳ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ನಂತರ ಆಯಾ ತಾಲ್ಲೂಕು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು, ಖಜಾಂಜಿ ಹಾಗೂ ರಾಜ್ಯ ಪರಿಷತ್‌ ಸದಸ್ಯರನ್ನು ಆಯ್ಕೆ ಮಾಡಲಾಗಿತ್ತು.

ತಾಲ್ಲೂಕು, ಜಿಲ್ಲಾ ಘಟಕಗಳ ತಲಾ ನಾಲ್ವರು ಪದಾಧಿಕಾರಿಗಳು ಸೇರಿದಂತೆ ಬೆಂಗಳೂರು ನಗರ ವ್ಯಾಪ್ತಿಯ 102 ರಾಜ್ಯ ಪರಿಷತ್ ಸದಸ್ಯರು ಹಾಗೂ ಎಂಟು ಯೋಜನಾ ಘಟಕಗಳ ಪದಾಧಿಕಾರಿಗಳು ಶುಕ್ರವಾರ ಕಬ್ಬನ್ ಉದ್ಯಾನದ ನೌಕರರ ಸಂಘದ ಕಚೇರಿ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಮತ ಚಲಾಯಿಸಿದರು. ಮತದಾನದ ನಂತರ ಮತ ಎಣಿಕೆ ಕಾರ್ಯ ನಡೆಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ