Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಹಶೀಲ್ದಾರ್‌ಗೆ ಜೀವ ಬೆದರಿಕೆ: ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ

 

ರಾಯಬಾಗ: ತಹಶೀಲ್ದಾರ್ ಸುರೇಶ ಮುಂಜೆ ಅವರ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ನೌಕರರು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಿಂದ ಝಂಡಾ ಕಟ್ಟೆವರೆಗೆ ಮೆರವಣಿಗೆ ನಡೆಸಿ, ರಸ್ತೆ ಬಂದ್ ಮಾಡಿ ಶನಿವಾರ ಪ್ರತಿಭಟನೆ ನಡೆಸಿದರು.

ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ ಪೋಳ ಮಾತನಾಡಿ, ತಹಶೀಲ್ದಾ‌ರ್ ಅವರು ತಮ್ಮ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ರೈತ ಸಂಘದ ಮುಖಂಡರು ಎಂದು ಹೇಳಿಕೊಂಡು ಕೆಲವರು ತಾಲೂಕಿನ ಕಂಕಣವಾಡಿ ಗ್ರಾಮದ ಜಮೀನಿಗೆ ಸಂಬಂಧಿಸಿದ ವಿಷಯವಾಗಿ ಕೆಲಸ ಮಾಡುವಂತೆ ಒತ್ತಾಯಿಸಿದ್ದಾರೆ. ತಹಶೀಲ್ದಾರ್ ಈ ಜಮೀನಿನ ಬಗ್ಗೆ ನ್ಯಾಯಾಲಯದಿಂದ ತಡೆಯಾಜ್ಞೆ ಇರುವುದರಿಂದ ಅದರಲ್ಲಿ ಯಾವುದೇ ವಹಿವಾಟು ಮಾಡಲು ಬರುವುದಿಲ್ಲ ಮತ್ತು ತಾವು ಕಚೇರಿ ಕೆಲಸ ನಿಮಿತ್ತ ಬೆಂಗಳೂರಿನ ಹೈಕೋರ್ಟ್‌ಗೆ ಹೋಗುತ್ತಿದ್ದು, ಬಂದ ನಂತರ ಪರಿಶೀಲಿಸುವುದಾಗಿ ಸೌಜನ್ಯದಿಂದ ಹೇಳಿದ್ದಾರೆ. ಆದರೆ ಆರೋಪಿಗಳು ತಹಶೀಲ್ದಾರರಿಗೆ ಏರು ಧ್ವನಿಯಲ್ಲಿ ಏಕವಚನದಲ್ಲಿ ನಿಂದಿಸಿ, ಕಚೇರಿ ಮುಖ್ಯದ್ವಾರವನ್ನು ಬಂದ್ ಮಾಡಿ, ಅವರ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದನ್ನು ನೌಕರರ ಸಂಘವು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಇಂತಹ ಕಹಿ ಘಟನೆಯಿಂದ ತಾಲ್ಲೂಕಿನ ಸರ್ಕಾರಿ ನೌಕರರಲ್ಲಿ ಭೀತಿಯುಂಟಾಗಿದ್ದು, ಈ ರೀತಿಯ ಗೂಂಡಾ ವರ್ತನೆಯಿಂದ ಸರ್ಕಾರಿ ನೌಕರರ ಮಾನಸಿಕ ಸ್ಥೆರ್ಯ ಕುಸಿಯುತ್ತಿದೆ. ಸರ್ಕಾರಿ ನೌಕರರಿಗೆ ಸೂಕ್ತ ರಕ್ಷಣೆ ನೀಡಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ಮುಂಬರುವ ದಿನಗಳಲ್ಲಿ ಸರ್ಕಾರಿ ನೌಕರರು ಉಗ್ರ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ