E-PAPER
25 Nov 2026, 07:24:29 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 12ನೇ ಶತಮಾನದ ಸಮಾಜ ಸುಧಾರಕ ಜಗಜ್ಯೋತಿ  ಬಸವಣ್ಣನವರ ಕುರಿತು ಆಕ್ಷೇಪಾರ್ಹ ಉಲ್ಲೇಖಗಳನ್ನು ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಲೇಖಕ ರವಿ ಹಂಜ್ ಅವರು ಬರೆದಿರುವ ‘ಬಸವ ಮಂಟಪ’ ಪುಸ್ತಕದ ಮುಟ್ಟುಗೋಲಿಗೆ ರಾಜ್ಯ ಸರ್ಕಾರಬ ಆದೇಶ ಹೊರಡಿಸಿದೆ. ವೀರಶೈವ-ಲಿಂಗಾಯತ ಸಂಘಟನೆಗಳು ಹಾಗೂ ಬಸವಣ್ಣನವರ ಅನುಯಾಯಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ.
ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಪುಸ್ತಕವನ್ನುಮುಟ್ಟುಗೋಲು ಹಾಕಿಕೊಳ್ಳುವ ಹಾಗೂ ಅದರ ಲೇಖಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿತ್ತು. ಇದರ ಬೆನ್ನಲ್ಲೇ ನವೆಂಬರ್ 24ರ ಮಂಗಳವಾರ ಸರ್ಕಾರ ಮುಟ್ಟುಗೋಲಿಗೆ ಆದೇಶ ಹೊರಡಿಸಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ: ಬುಧವಾರ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ಇನ್ನೊಂದೆಡೆ, ರವಿ ಹಂಜ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯು ಬೆಂಗಳೂರಿನ 56ನೇ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿತ್ತು. ಉಭಯ ಪಕ್ಷಗಳ ವಾದಗಳನ್ನು ಆಲಿಸಿದ ನ್ಯಾಯಾಧೀಶರು ಅರ್ಜಿಯ ಕುರಿತ ತೀರ್ಪನ್ನು ನವೆಂಬರ್ 25ಕ್ಕೆ ಕಾಯ್ದಿರಿಸಿದ್ದಾರೆ.
ರವಿ ಹಂಜ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ ಶ್ಯಾಮ್, ವಿವಾದಕ್ಕೆ ಕಾರಣವಾಗಿರುವ ಬರಹಗಳು ಕಳೆದ ಎರಡು ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಲೇಖನಗಳ ರೂಪದಲ್ಲಿ ಪ್ರಕಟವಾಗಿದ್ದರೂ ಆಗ ಯಾರೂ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಆ ಲೇಖನಗಳನ್ನೆಲ್ಲ ಒಟ್ಟುಗೂಡಿಸಿ ಪುಸ್ತಕದ ರೂಪದಲ್ಲಿ ಪ್ರಕಟಿಸಿದ ನಂತರವಷ್ಟೇ ದೂರು ದಾಖಲಿಸಲಾಗಿದೆ ಎಂಬುದು ರವಿ ಹಂಜ್ ಪರ ವಕೀಲರ ವಾದವಾಗಿದೆ. ಪೊಲೀಸರು ಯಾವುದೇ ಪ್ರಾಥಮಿಕ ತನಿಖೆ ನಡೆಸದೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ರವಿ ಹಂಜ್ ಪರ ವಕೀಲರು ಆರೋಪಿಸಿದರು. ಅಲ್ಲದೆ, ರಾಜಕೀಯ ನಾಯಕರ ಹೇಳಿಕೆಗಳು ಪೊಲೀಸರ ಕ್ರಮದ ಮೇಲೆ ಪ್ರಭಾವ ಬೀರಿವೆ ಎಂದೂ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.

ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಹಂಜ್ ಅವರು ಕರ್ನಾಟಕ ಹೈಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸಿದ್ದು, ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.
ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ತಮ್ಮ ವಿರುದ್ಧ ದೂರು ದಾಖಲಿಸಿರುವುದರ ಹಿಂದೆ ವೈಯಕ್ತಿಕ ದ್ವೇಷವಿದೆ ಎಂದು ಹಂಜ್ ಆರೋಪಿಸಿದ್ದಾರೆ. ಈ ಹಿಂದೆ ಬಸವ ಸಮಿತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತಾವು ಬರೆದಿದ್ದ ಬರಹಗಳಿಂದ ಅಸಮಾಧಾನಗೊಂಡಿರುವ ಅರವಿಂದ ಜತ್ತಿ, ವೈಯಕ್ತಿಕ ಕಾರಣಗಳಿಗಾಗಿ ತಮ್ಮ ವಿರುದ್ಧ ದೂರು ನೀಡಿದ್ದಾರೆ ಎಂಬುದು ಅವರ ಅರ್ಜಿಯಲ್ಲಿನ ಆರೋಪವಾಗಿದೆ.
ಅಲ್ಲದೆ, ಮುಖ್ಯಮಂತ್ರಿ ಹಾಗೂ ಕೆಲವು ಸಚಿವರು ನೀಡಿರುವ ಹೇಳಿಕೆಗಳು ಪೊಲೀಸರ ಮೇಲೆ ಒತ್ತಡ ಸೃಷ್ಟಿಸಿವೆ. ಇದರಿಂದ ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯುವ ಸಾಧ್ಯತೆಯ ಬಗ್ಗೆ ಅನುಮಾನ ಮೂಡಿದೆ ಎಂದೂ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ. ಈ ಅರ್ಜಿಯಲ್ಲಿ ಅರವಿಂದ ಜತ್ತಿ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆಯನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ. ಆದರೆ, ಈ ಅರ್ಜಿಯು ಇನ್ನೂ ವಿಚಾರಣೆಗೆ ಪಟ್ಟಿ ಆಗಿಲ್ಲ.

ಬೆಳಗಾವಿಯಲ್ಲೂ ಪ್ರಕರಣ ದಾಖಲು
ಇದರ ನಡುವೆ, ರವಿ ಹಂಜ್ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲೂ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಪೊಲೀಸರು ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ನವೆಂಬರ್ 26ರೊಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.
‘ಬಸವ ಮಂಟಪ’ ಪುಸ್ತಕದ ವಿರುದ್ಧ ವೀರಶೈವ-ಲಿಂಗಾಯತ ಸಮುದಾಯದ ವಿವಿಧ ಸಂಘಟನೆಗಳು ಪ್ರತಿಭಟನೆಗಳು ನಡೆದಿದ್ದು, ಲೇಖಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂಡಲಗಿ–ಗುರ್ಲಾಪುರ ರಸ್ತೆಯಲ್ಲಿ ಭೀಕರ ಅಪಘಾತ : ಆರೋಗ್ಯ ಸಿಬ್ಬಂದಿ ಸ್ಥಳದಲ್ಲೇ ಸಾವುಲಿಂಗರಾಜ ಕಾಲೇಜಿನ ಎನ್‌ಸಿಸಿ ಘಟಕದಿಂದ ರಕ್ತದಾನ ಶಿಬಿರಉತ್ತರ ಪ್ರದೇಶ ಚುನಾವಣೆ : ಕಾಂಗ್ರೆಸ್ ಕೇಳಿದ್ದ 2 ಕ್ಷೇತ್ರಗಳೂ ಸೇರಿ 5 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ ಸಮಾಜವಾದಿ ಪಕ್ಷ !ಭಾರತದಲ್ಲಿ ಚಿನ್ನದ ಆಮದು ಶೇ. 40ರಷ್ಟು ಕುಸಿತ, ದರವೂ ಕುಸಿತ ; ಮೋದಿ ಮನವಿಗೆ ಜನರು ಸ್ಪಂದಿಸಿದ್ದು ಕಾರಣ ?ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ರಾಜ್ಯ ಸರ್ಕಾರ ಆದೇಶಗೋವಾ ಮದ್ಯ ಅಕ್ರಮ ಸಾಗಾಟ ಪತ್ತೆ: ಕಾರು ಸಹಿತ 3.21 ಲಕ್ಷ ಮೌಲ್ಯದ ಸ್ವತ್ತು ವಶಭಾರತದ ಸಂವಿಧಾನದ 77 ವರ್ಷಗಳು: ಹಿನ್ನೋಟ ಮತ್ತು ಮುನ್ನೋಟ: ರಾಷ್ಟ್ರೀಯ ಸಮ್ಮೇಳನ ಆಯೋಜನೆನೂತನ ಸಮುದಾಯ ಭವನ ಉದ್ಘಾಟನೆಆಶಾ ಕಾರ್ಯಕರ್ತೆಯರ ಪ್ರತಿಭಟನೆ: ತಕ್ಷಣ ಬೇಡಿಕೆ ಈಡೇರಿಸಿ: ಜಗದೀಶ ಶೆಟ್ಟರ ಆಗ್ರಹಮ್ಯಾಗ್ನೆಟ್ ಯೋಜನೆ ಮೂಲಕ ಸಹಸ್ರಾರು ಕನ್ನಡ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಕನ್ನಡ ಸಂಘಟನೆಗಳು ಗಂಭೀರವಾಗಿ ಪರಿಗಣಿಸಲು ಅಶೋಕ ಚಂದರಗಿ ಮನವಿ