Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ

 

ಬೆಂಗಳೂರು :
ಕೇರಳದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ ಪತ್ತೆಯಾದ ನಂತರ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿದ್ದು, ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ. ತೀವ್ರ ಶ್ವಾಸಕೋಶ ಹಾಗೂ ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕೋವಿಡ್ – 19 ರಾಜ್ಯ ತಾಂತ್ರಿಕ ಸಲಹಾ ಸಮಿತಿ 202ನೇ ಸಭೆಯ ಶಿಫಾರಸಿನ ಅನ್ವಯ ಈ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ ಯಾವುದೇ ರೀತಿಯ ನಿರ್ಬಂಧ ವಿಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಕೋವಿಡ್ ಬಗ್ಗೆ ಎರಡು ಪ್ರತ್ಯೇಕ ಮಾರ್ಗಸೂಚಿಗಳನ್ನು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಒಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆಗಿದ್ದರೆ ಮತ್ತೊಂದು ಸಾರ್ವಜನಿಕ ಸಲಹಾ ಮಾರ್ಗಸೂಚಿಯಾಗಿದೆ.

ಭಾರತ ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಸರ್ವೇಕ್ಷಣೆಯನ್ನು ಹೆಚ್ಚಿಸುವುದು ಅಥವಾ ನಿರ್ಬಂಧಗಳನ್ನು ಈಗಲೇ ಹೇರುವ ಅವಶ್ಯಕತೆಯಿರುವುದಿಲ್ಲ ಎಂದು ತಿಳಿಸಿದೆ.
ಆದಾಗ್ಯೂ, ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆಯಿಂದ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ನಡೆಸುವುದು ಹಾಗೂ ವರದಿ ಸಲ್ಲಿಸುವುದು ಅಗತ್ಯವಾಗಿದೆ. ಸರ್ಕಾರಿ, ಖಾಸಗಿ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ, ಎಲ್ಲ SARI ಪ್ರಕರಣಗಳು ಹಾಗೂ 20 ILI ಪ್ರಕರಣಗಳ ಪೈಕಿ 1 ILI ಪ್ರಕರಣವನ್ನು ಕೋವಿಡ್ -19 ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಲಾಗಿದೆ.

ಕೋವಿಡ್ ಮಾರ್ಗಸೂಚಿಯಲ್ಲಿ ಏನಿದೆ?
ಎಲ್ಲ ಹಿರಿಯ ನಾಗರಿಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು
ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.
ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ
ಕೋವಿಡ್‌ ನಿರ್ಬಂಧ ಅವಶ್ಯಕತೆ ಇಲ್ಲ.
ಗಡಿ ಜಿಲ್ಲೆಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಬೇಕು
ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ
ರೋಗ ಲಕ್ಷಣ ಇರುವವರನ್ನು ಕೊವಿಡ್‌ ಪರಿಶೀಲನೆಗೆ ಒಳಪಡಿಸಬೇಕು
ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು
ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆಗೆ ಸೂಚನೆ
ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.

ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತ.
ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆ ಅಗತ್ಯ.
ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ ಭೇಟಿ ಮಾಡಬೇಕು.

ಸರ್ಕಾರಿ, ಖಾಸಗಿ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಎಲ್ಲಾ SARI ಪ್ರಕರಣಗಳು ಹಾಗೂ 20 ಐಎಲ್ ಐ ಪ್ರಕರಣಗಳ ಪೈಕಿ 1 ಐಎಲ್ ಐ ಪ್ರಕರಣವನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್‌ ಧರಿಸಬೇಕು ಎಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯಿದ್ದು, ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಗುಂಪು ಗುಂಪಾಗಿ ಸೇರುವ ಪ್ರಕರಣಗಳು ಹಾಗೂ ಮರಣಗಳು ವರದಿಯಾಗುವ ಸಂದರ್ಭದಲ್ಲಿ ಅಗತ್ಯ ಸಂಖ್ಯೆಯ ಮಾದರಿಗಳನ್ನು ಜಿನೋಮ್ ಸಿಕ್ವೇನ್ಸಿಂಗ್ ಪರೀಕ್ಷೆಗೆ ರವಾನಿಸಬೇಕು ಎಂದು ಸೂಚಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ