Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : `ಪರೀಕ್ಷೆ-1 ನೋಂದಣಿ’ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2025ನೇ ಮಾರ್ಚ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ / ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ನವೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ.

ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದ್ದು, 2025ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ಲೈನ್ ಮುಖಾಂತರ ನೋಂದಾಯಿಸಲು ಅವದಿಯನ್ನು ದಿನಾಂಕ:20.11.2024ರವರೆಗೆ ವಿಸ್ತರಿಸಲಾಗಿತ್ತು.

ಆದರೆ, ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಮಾಡಲು ದಿನಾಂಕವನ್ನು ಪುನ: ವಿಸ್ತರಿಸಲು ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ನೋಂದಣಿಗಾಗಿ ದಿನಾಂಕಗಳನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ. ಪುನ: ದಿನಾಂಕ ವಿಸ್ತರಣೆಯನ್ನು ಮಾಡಲಾಗುವುದಿಲ್ಲ. ಈ ಸಂಬಂಧ ವಿಸ್ತರಿಸಿರುವ ದಿನಾಂಕದವರೆಗೆ ವಿದ್ಯಾರ್ಥಿಗಳ ನೋಂದಣಿ ಮಾಡತಕ್ಕದ್ದು. ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಮುಖ್ಯೋಪಾಧ್ಯಾಯರ ಮುಖಾಂತರ ವಿದ್ಯಾರ್ಥಿಗಳ/ಪೋಷಕರ ಗಮನಕ್ಕೆ ತಂದು ಇದರ ಸದುಪಯೋಗವನ್ನು ಪರ ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು / ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ