Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಬೆಳಗಾವಿ : ರಾಜ್ಯದ ಕಾಂಗ್ರೆಸ್‌ ಸರ್ಕಾರವು ' ಹಬ್ ಅಂಡ್ ಸ್ಪೋಕ್ ' ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆಗೊಳಿಸುವುದಾಗಿ ಸರ್ಕಾರವು ತಿಳಿಸಿದೆ. ಈ ಮೂಲಕ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. 4ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ಈ ನಡೆಯನ್ನು ಎಐಡಿಎಸ್ಓ ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ ಎಂದು ಸಂಘಟನೆ ಜಿಲ್ಲಾ
ಸಂಚಾಲಕ ಮಹಾಂತೇಶ ಬಿಳೂರ ತಿಳಿಸಿದ್ದಾರೆ.

ಹಿಂದಿನ ಬಿಜೆಪಿ ರಾಜ್ಯ ಸರ್ಕಾರವು ಇದೇ ನೆಪವೊಡ್ಡಿ ಎನ್ಈಪಿ-2020ರ ಅಡಿಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಅದರ ವಿರುದ್ಧ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್ಓ ನೇತೃತ್ವದಲ್ಲಿ ಬೃಹತ್ ಆಂದೋಲನ ನಡೆಸಿ 35 ಲಕ್ಷಕ್ಕೂ ಹೆಚ್ಚು ಸಹಿಗಳನ್ನು ಸಂಗ್ರಹಿಸುವುದರ ಮೂಲಕ ಶಾಲೆಗಳನ್ನ ರಕ್ಷಿಸಿದ್ದರು. ಆದರೆ, ಈಗ ಮತ್ತೆ ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ಮುಖಾಂತರ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ರೈತ-ಕಾರ್ಮಿಕರು ಹಾಗೂ ಜನ ಸಾಮಾನ್ಯರಿಗೆ ವಿಶ್ವಾಸದ್ರೋಹವೆಸಗಿದೆ. ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರ ಇದಾಗಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, 'ನೆಗಡಿ ಬಂದರೆ ಮೂಗು ಕತ್ತರಿಸಿದಂತೆ'! ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯಗಳನ್ನು ನೀಡಿ ರಕ್ಷಿಸಬೇಕೆಂದು ಎಐಡಿಎಸ್ಓ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ ಹಾಗೂ ಇದರ ವಿರುದ್ಧ ಪ್ರಬಲ ಪ್ರತಿರೋಧ ಚಳುವಳಿ ಬೆಳೆಸಬೇಕೆಂದು ರಾಜ್ಯದ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಣಪ್ರೇಮಿ ಜನತೆಗೆ ಕರೆ ನೀಡುತ್ತದೆ ಎಂದು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ