Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಜಾತಶತ್ರು ಅಟಲ್ ಜೀ ಅವರ ಜನ್ಮ ಶತಮಾನೋತ್ಸವ ನಿಮಿತ್ತ ಜಿಲ್ಲೆಯಾದ್ಯಂತ ನಾನಾ ಕಾರ್ಯಕ್ರಮಗಳ ಆಯೋಜನೆ -ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ

ಬೆಳಗಾವಿ : ಬಿಜೆಪಿ ಬೆಳಗಾವಿ ಗ್ರಾಮಂತರ ಜಿಲ್ಲಾ ಕಚೇರಿಯಲ್ಲಿ ಅಟಲ್ ಜೀ ಜನ್ಮ ಶತಮಾನೋತ್ಸವ ಸಮಿತಿಯ ಸಭೆಯನ್ನು ಉದ್ದೇಶಿಸಿ ಸುಭಾಷ್ ಪಾಟೀಲ ಅವರು ಮಾತನಾಡಿ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಆಚರಣೆಗೆ ಜಿಲ್ಲಾ ತಂಡವನ್ನು ರಚಿಸಲಾಗಿದೆ ಎಂದು ವಿವರಿಸಿದರು.

ಬಹುಮುಖಿ ವ್ಯಕ್ತಿತ್ವದ ಅಟಲ್ ಜೀ ಅವರ ಜನ್ಮದಿನದ ಶತಮಾನೋತ್ಸವದ ಸಂದರ್ಭದಲ್ಲಿ ಬೂತ್, ಮಂಡಲ, ಜಿಲ್ಲೆ ರಾಜ್ಯ ಹಾಗೂ ರಾಷ್ಟ್ರ
ಮಟ್ಟದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು. ಅಟಲ್‌ಜಿ ಅವರ ಪುಸ್ತಕ,
ಸಾಹಿತ್ಯಗಳ ಪ್ರದರ್ಶನ,ಭಾಷಣ ಸ್ಪರ್ಧೆ,ಕಾರ್ಯಕರ್ತರ ಸನ್ಮಾನ, ಅಟಲ್‌ಜೀ ಅವರ ಅಪಾರ ಕೊಡುಗೆಗಳ ಪ್ರದರ್ಶನ ನಡೆಯಲಿದೆ ಎಂದು
ತಿಳಿಸಿದರು.
ಫೆ.15ರಿಂದ ಮಾರ್ಚ್ 15ರವರೆಗೆ ಜಿಲ್ಲಾ ಮಟ್ಟದಲ್ಲಿ ಅಟಲ್ ವಿರಾಸತ್ ಸಮ್ಮೇಳನ
ಆಯೋಜಿಸಲಾಗುವುದು. ಅಲ್ಲಿಯೂ ಅಟಲ್‌ಜೀ ಅವರ ಬಗ್ಗೆ ಹಲವಾರು ಪುಸ್ತಕಗಳ ಪ್ರದರ್ಶನ,
ಹಿರಿಯರ ಗೌರವ, ಅಟಲ್‌ಜೀ ಅವರ ಹೋರಾಟದ ದಾರಿಯಲ್ಲಿ ಬೆಳೆದುಬಂದ ವ್ಯಕ್ತಿಗಳಿಗೆ ಗೌರವ
ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಅಟಲ್‌ಜೀ ಅವರು ದೇಶದ ಅಪರೂಪದ ನಾಯಕ, ಯುವಪೀಳಿಗೆ ಮತ್ತು ನಾಗರಿಕರಿಗೆ ಅವರ
ಕೊಡುಗೆ- ಸಾಧನೆಯನ್ನು ಪರಿಚಯಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು. ಇದಕ್ಕಾಗಿ ಎಲ್ಲ
ರೀತಿಯ ತಯಾರಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಸಮಿತಿಯಲ್ಲಿ ಜಿಲ್ಲಾ ಸಂಚಾಲಕರಾಗಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ,ಸಹ ಸಂಚಾಲಕರಾಗಿ ಸಚಿನ್ ಕಡಿ, ಸುಭಾಷ್ ಸಣ್ಣವೀರಪ್ಪನವರ, ಸುನಿಲ್ ಮಡ್ಡಿಮನಿ ಅವರು ಕಾರ್ಯ ನಿರ್ವಹಿಸುವರು
ಎಂದು ಹೇಳಿದರು.
ಮಾಜಿ ಶಾಸಕ ಹಾಗೂ ಅಭಿಯಾನದ ಜಿಲ್ಲಾ ಸಂಚಾಲಕ ಮಹಾಂತೇಶ ದೊಡ್ಡಗೌಡರ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಮಂಡಲಗಳಲ್ಲೂ
ಈ ಸಂಬಂಧ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು. ಅಟಲ್‌ ಜೀ ಅವರ ರಾಜ್ಯ ಪ್ರವಾಸ
ಸಂಬಂಧ ಮಾಹಿತಿಯನ್ನೂ ಸಂಗ್ರಹಿಸುತ್ತಿದ್ದೇವೆ. ಫೋಟೊಗಳು, ಸ್ಮರಣಫಲಕಗಳನ್ನು ಸಂಗ್ರಹಿಸುವ
ಯೋಜನೆಯೂ ಇದೆ ಎಂದು ತಿಳಿಸಿದರು. ಫೆ. 14ರಂದು ಸಂಗ್ರಹಿತ ಮಾಹಿತಿಯ ಪ್ರದರ್ಶಿನಿಯೂ
ನಡೆಯುತ್ತದೆ ಎಂದರು.

ಜಿಲ್ಲೆಯ ಸಹ ಸಂಚಾಲಕ ಸಚಿನ್ ಕಡಿ, ಸುಭಾಷ್ ಸಣ್ಣವೀರಪ್ಪನವರ, ಸುನಿಲ್ ಮಡ್ಡಿಮನಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಧನಶ್ರೀ ದೇಸಾಯಿ,ಜಿಲ್ಲಾ ಉಪಾಧ್ಯಕ್ಷ ವಿನಯ್ ಕದಂ, ಕೋಶಾಧ್ಯಕ್ಷ ಸಂತೋಷ ದೇಶನೂರ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೊಲಕಾರ, ಮಾಧ್ಯಮ ಸಹ ಪ್ರಮುಖ ಬಾಳೇಶ ಚವ್ವನ್ನವರ ಹಾಗೂ ಪ್ರಮುಖ ಮುಖಂಡರು ಪದಾಧಿಕಾರಿಗಳು ಉಪಸ್ಥಿತರಿದ್ದರು ವೀರಭದ್ರ ಪೂಜಾರಿ ನಿರೂಪಿಸಿದರು ಸುಭಾಷ್ ಸಣ್ಣವೀರಪ್ಪನವರ ವಂದಿಸಿದರು
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ