ಬೆಳಗಾವಿ : ಗೋಕಾಕ ಖಾಸಗಿ ಆಸ್ಪತ್ರೆಯಲ್ಲಿ ನೌಕರರಾಗಿದ್ದ ಲೊಳಸೂರ ಗ್ರಾಮದ ಸುಭಾಷ ರಾಮಚಂದ್ರ ಬಾಗಾಯಿ (37 )ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ರವಿವಾರ ಆಸ್ಪತ್ರೆಗೆ ರಜೆ ಇತ್ತು. ಯಾವುದೇ ರೋಗಿಗಳು ಇರಲಿಲ್ಲ. ಆಸ್ಪತ್ರೆಯ ಎಲ್ಲಾ ಬೀಗದ ಕೈ ಅವರ ಬಳಿ ಇದ್ದವು. ಭಾನುವಾರ ರಾತ್ರಿ ಆಸ್ಪತ್ರೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಗೋಕಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.