Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿಂದೂಗಳ ಮೇಲೆ ಏಕಿಷ್ಟು ಆಕ್ರೋಶ : ಚಕ್ರವರ್ತಿ ಸೂಲಿಬೆಲೆ

ಬಂಟ್ವಾಳ : ಹಿಂದೂ ಧರ್ಮವು ಪರಿಶುದ್ಧ ಗಂಗೆಯ ಸ್ವರೂಪ. ಈ ಧರ್ಮದ ಮೇಲೆ ಏಕಿಷ್ಟು ಆಕ್ರೋಶ ಎಂದು ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪ್ರಶ್ನಿಸಿದರು.

ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಆಗ್ರಹಿಸಿ ಇಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಅವರು ಮಾತನಾಡಿದರು.

ಹೋಳಿ ಇರಲಿ, ದೀಪಾವಳಿ ಹಬ್ಬ ಇರಲಿ ಹಿಂದೂ ಧರ್ಮದ ಮೇಲೆ ನಿರಂತರ ಸಾಂಸ್ಕೃತಿಕ ಆಘಾತ ನಡೆಯುತ್ತಿದೆ. ಹಿಂದೂಗಳ ಆಚರಣೆಗಳನ್ನು ಮಾಧ್ಯಮಗಳ ಮೂಲಕ ಅಪಹಾಸ್ಯ ಮಾಡಲಾಗುತ್ತಿದೆ. ಹಿಂದೂಗಳ ಶ್ರದ್ದಾ ಕೇಂದ್ರಗಳಾದ ದೇವಸ್ಥಾನಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಸಂತರ ಮೇಲೆ ಆರೋಪಗಳನ್ನು ಹಾಕಲಾಗುತ್ತದೆ, ಆಕ್ರಮಣಗಳನ್ನು ಮಾಡಲಾಗುತ್ತದೆ. ಎಡಪಂಥೀಯರು ಹಿಂದೂಗಳನ್ನು ಜಾತಿ ಮತ ಪಂಥಗಳ ಹೆಸರಿನಲ್ಲಿ ವಿಭಜಿಸುತ್ತಾರೆ. ಅಮೆರಿಕ ಪ್ರಾಯೋಜಿತ ಮತಾಂತರ ಹಾಗೂ ದೇಶ ವಿರೋಧಿ ಷಡ್ಯಂತ್ರಕ್ಕೆ ಹಿಂದೂ ಸಮಾಜ ವ್ಯಾಪಕವಾಗಿ ಬಲಿಯಾಗುತ್ತಿದೆ. ಇದೆಲ್ಲದಕ್ಕೂ ಪರಿಹಾರವೆಂದರೆ ನಮ್ಮ ಧರ್ಮ ರಕ್ಷಣೆ ನಮ್ಮದೇ ಕರ್ತವ್ಯವಾಗಿದೆ ಎಂಬ ಅರಿವು ಮೂಡಿಸುವುದು. ಧರ್ಮ ರಕ್ಷಣೆಗಾಗಿ ಸರ್ವಸ್ವದ ತ್ಯಾಗ ಮಾಡಲು ನಾವು ಸಿದ್ದರಾಗಿರಬೇಕು. ಹಿಂದೂ ಸಮಾಜ ಜಾಗೃತವಾದರೆ ಇತರರು ಏನೂ ಮಾಡಲು ಸಾಧ್ಯವಿಲ್ಲ ಎಂದರು.

ವಕೀಲ ಕೃಷ್ಣಮೂರ್ತಿ, 'ಸ್ವಾರ್ಥ ಮರೆತು ನಾವು ಪರಮಾರ್ಥದ ಕಡೆಗೆ ಹೋಗಬೇಕಾಗಿದೆ, ವಿವಿಧ ಸಂಘಟೆನೆಗಳೆಲ್ಲಾ ಸೇರಿ ಹಿಂದೂ ರಾಷ್ಟ್ರದೆಡೆಗೆ ಸಾಗಬೇಕಾಗಿದೆ. ಇದಕ್ಕಾಗಿ ನ್ಯಾಯ ವ್ಯವಸ್ಥೆಯನ್ನು ಅರಿತುಕೊಂಡು ಅದರ ಸದುಪಯೋಗಪಡಿಸಿಕೊಳ್ಳಬೇಕು. ವಕೀಲರು ರಾಷ್ಟ್ರ ಮತ್ತು ಧರ್ಮದ ವಿಚಾರಗಳನ್ನು ತಮ್ಮ ಕರ್ತವ್ಯವೆಂದು ಪರಿಭಾವಿಸಿ ಈ ವಿಚಾರದಲ್ಲಿ ದಿಟ್ಟ ಹೆಜ್ಜೆಗಳನ್ನಿಡಬೇಕು' ಎಂದರು.

ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿ, ಸನಾತನ ಸಂಸ್ಥೆಯ ಸಂತ ರಮಾನಂದ ಗೌಡ, ವಕೀಲ ಕೃಷ್ಣಮೂರ್ತಿ, ಚಕ್ರವರ್ತಿ ಸೂಲಿಬೆಲೆ, ಉದ್ಯಮಿ ಎಂ. ಜೆ. ಶೆಟ್ಟಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ