Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುಮಲತಾ ಇಂದು ನಿರ್ಣಾಯಕ ನಿರ್ಧಾರ ಪ್ರಕಟ

 

ಮಂಡ್ಯ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಟಿಕೆಟ್‌ ವಂಚಿತ ಸಂಸದೆ ಸುಮಲತಾ ಅಂಬರೀಶ್‌ ಬುಧವಾರ ನಗರದಲ್ಲಿ ಬೆಂಬಲಿಗರು, ಕಾರ್ಯಕರ್ತರ ಸಭೆ ಕರೆದಿದ್ದಾರೆ. ಅವರ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿರುವ ಈ ಸಭೆ ತೀವ್ರ ಕುತೂಹಲ ಕೆರಳಿಸಿದೆ. ಬುಧವಾರ ಬೆಳಗ್ಗೆ 10ಕ್ಕೆ ನಗರದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಸಂಸದೆ ಸುಮಲತಾ ಅಂಬರೀಶ್‌ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಭೆಗೆ ಆಗಮಿಸಲಿದ್ದಾರೆ. ನಟ ದರ್ಶನ್‌ ಮತ್ತು ಅಭಿಷೇಕ್‌ ಅಂಬರೀಶ್‌ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಸದೆಯಾಗಿ ಐದು ವರ್ಷಗಳ ಕಾಲ ಜಿಲ್ಲೆಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಸಾಕ್ಷ್ಯಚಿತ್ರವನ್ನು ದರ್ಶನ್‌ ಇದೇ ಸಮಯದಲ್ಲಿ ಬಿಡುಗಡೆ ಮಾಡುವರು.

ಬಿಜೆಪಿ-ಜೆಡಿಎಸ್‌ ಮೈತ್ರಿ ಕಾರಣದಿಂದ ಸಂಸದೆ ಸುಮಲತಾ ಅವರಿಗೆ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೈತಪ್ಪಿದೆ. ಜೆಡಿಎಸ್‌ಗೆ ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟಿರುವುದರಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಇದರಿಂದ ತೀವ್ರ ನಿರಾಸೆಗೊಳಗಾಗಿರುವ ಸುಮಲತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಂಡ್ಯ ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಹೈಕಮಾಂಡ್‌ ಕೂಡ ಮುಂದಿನ ದಿನಗಳಲ್ಲಿ ರಾಜಕೀಯ ಸ್ಥಾನ-ಮಾನ ನೀಡುವ ಭರವಸೆಯನ್ನೂ ನೀಡಿದೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಸುಮಲತಾ ಸಮಾಧಾನಗೊಂಡವರಂತೆ ಕಂಡುಬಂದಿದ್ದಾರೆ.

ಭವಿಷ್ಯದ ರಾಜಕೀಯದ ಹಿತದೃಷ್ಟಿ ಹಾಗೂ ಪುತ್ರ ಅಭಿಷೇಕ್‌ ಅಂಬರೀಶ್‌ಗೆ ಜಿಲ್ಲೆಯಲ್ಲಿ ರಾಜಕೀಯ ನೆಲೆ ದೊರಕಿಸುವ ಅನಿವಾರ್ಯತೆ ಕಾರಣ ಸುಮಲತಾ ಚುನಾವಣೆಗೆ ಸ್ಪರ್ಧಿಸುವ ದುಡುಕಿನ ನಿರ್ಧಾರ ಮಾಡುವುದಿಲ್ಲ. ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಬೆಂಬಲಕ್ಕೆ ನಿಲ್ಲುವುದರೊಂದಿಗೆ ಮೈತ್ರಿಧರ್ಮ ಪಾಲಿಸಲು ಮಾನಸಿಕವಾಗಿ ನಿರ್ಧರಿಸಿದ್ದಾರೆ ಎಂಬ ಮಾತುಗಳು ಬೆಂಬಲಿಗರ ವಲಯದಲ್ಲಿ ಕೇಳಿಬರುತ್ತಿವೆ.

ಹಳೆಯ ಕಹಿ ನೆನಪುಗಳನ್ನು ಮರೆತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸುಮಲತಾ ಬೆಂಬಲ ಕೋರುವುದರೊಂದಿಗೆ ಸ್ನೇಹದ ರಾಜಕಾರಣ ಬಯಸಿದ್ದಾರೆ. ಸುಮಲತಾ ಪಾಲಿಗೆ ಕಾಂಗ್ರೆಸ್‌ ಬಾಗಿಲು ಮುಚ್ಚಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಗೆಲುವು ಕಷ್ಟವಾಗಬಹುದೆಂಬ ಅಭಿಪ್ರಾಯದೊಂದಿಗೆ ಮೈತ್ರಿಧರ್ಮ ಪಾಲಿಸುವುದೇ ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಸೂಕ್ತ ಎಂದು ಗಂಭೀರವಾಗಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.

ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಏನೇ ನಿರ್ಧಾರ ತೆಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇ‍ಳಿದ್ದೇನೆ. ನಿಮ್ಮ ಸಲಹೆ, ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ ಎಂದು ಸುಮಲತಾ ಹೇಳಿಕೊಂಡಿದ್ದಾರೆ.

ಮಂಗಳವಾರ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿರುವ ಅವರು, ಚುನಾವಣೆಗೆ ಸ್ಪರ್ಧಿಸುವ ಕುರಿತು ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತು ಗಂಭೀರ ಚಿಂತನೆ ಕೂಡ ನಡೆದಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಏನೇ ನಿರ್ಧಾರ ತೆಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಕಾಳಿಕಾಂಬ ದೇಗುಲದ ಆವರಣದಲ್ಲೇ ನಾನು ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆ ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ